ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ
National Service Scheme Special Annual Camp
ಲೋಕದರ್ಶನ ವರದಿ
ಬೆಳಗಾವಿ 13: ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲಯ ಬೆಳಗಾವಿ ಎನ್.ಎಸ್.ಎಸ್. ಘಟಕ -26 ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ವಾರ್ಷಿಕ ಶಿಬಿರವನ್ನು ಇತ್ತೀಚೆಗೆ ಅಗಸಗಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಿಬಿರದ ಅಂಗವಾಗಿ ಪ್ರತಿ ದಿನ ಸ್ವಚ್ಛತಾ ಕಾರ್ಯಕ್ರಮ ಹಾಗೂ ಧ್ವಜಾರೋಹಣ ಮತ್ತು ವಿಭಿನ್ನ ಚಟುವಟಿಕೆಗಳು, ಉಚಿತ ನೇತ್ರ ತಪಾಸಣಾ ಶಿಬಿರ, ಮಧುಮೇಹ ತಪಾಸಣಾ ಶಿಬಿರ, ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಕಾರ್ಯಕ್ರಮ ಮತ್ತು, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್ ಬಗೆಗಿನ ಕರಪತ್ರ ಹಂಚಿಕೆ, ಗ್ರಾಮಸ್ಥರಿಗಾಗಿ ಪ್ರಥಮ ಚಿಕಿತ್ಸೆ ಮತ್ತು ಹೃದಯ ರಕ್ತನಾಳದ ಪುನ:ರುಜ್ಜೀವನ ತರಬೇತಿ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಙತಿಹಾಸಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ಮತ್ತು ಪೌಷ್ಠಿಕಾಂಶದ ಮೌಲ್ಯಮಾಪನ ಮತ್ತು ಮಕ್ಕಳ ಬೆಳವಣಿಗೆಯ ಪರೀಶೀಲನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರತಿ ದಿನ ಸಂಜೆ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗಾಗಿ ಕ್ರೀಡೆ ರಂಗೋಲಿ, ರಸಪ್ರಶ್ನೆ, ಪ್ರಬಂಧ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳನ್ನು ಏರಿ್ಡಸಿ ಬಹುಮಾನ ವಿತರಿಸಲಾಯಿತು.
ಕೆ.ಎಲ್.ಇ. ಶುಶ್ರೂಷಾ ಮಹಾವಿದ್ಯಾಲಯ ಪ್ರಾಚಾರ್ಯರಾದ ಪ್ರೊ (ಡಾ).ವೀರೇಶಕುಮಾರ ನಂದಗಾವ, ಸಹ ಪ್ರಾಧ್ಯಾಪಕರಾದ ಡಾ.ಗುರುರಾಜ ಉಡಪಿ, ಸಂಜೀವ ಬಡ್ಲಿ ಸಂಯೋಜನಾಧಿಕಾರಿಗಳು, ಅಮೃತ ಮುದ್ದಣ್ಣವರ ಗ್ರಾಮ ಪಂಚಾಯತ ಅಧ್ಯಕ್ಷರು, ಗುಂಡು ಕುರೇನ್ನವರ ಗ್ರಾ.ಪ.ಸದಸ್ಯರು, ಶಿವಾನಂದ ಕ ಪಾಟೀಲ ಎಸ್‌ಡಿಎಂಸಿ, ಅಧ್ಯಕ್ಷರು, ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾದ ಪಿ.ಆರ್.ಚವಾಣ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಾದ ಪಿ.ಆರ್.ಚವಾಣ, ಮಾಲತಿ ಕಾಂಬಳೆ, ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಊರಿನ ನಾಗರಿಕರು ಶಿಬಿರದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 