ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್‌: ತೈಯಬಾ ಪಠಾಣ ಡಬಲ್ ಚಿನ್ನದ ಪದಕ

ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್‌: ತೈಯಬಾ ಪಠಾಣ ಡಬಲ್ ಚಿನ್ನದ ಪದಕ National Skating Championship: Taiba Pathana wins double gold medal

 

ಲೋಕದರ್ಶನ ವರದಿ, 

ಜಮಖಂಡಿ 25: ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ 8ನೇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಜಮಖಂಡಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ತೈಯಬಾ ಮಹ್ಮದರಫೀಕ್ ಪಠಾಣ 500 ಮೀಟರ್ ಹಾಗೂ 1000 ಮೀಟರ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಡಬಲ್ ಚಿನ್ನದ ಪದಕ ಗೆದ್ದು ರಾಜ್ಯ ಹಾಗೂ ಪಟ್ಟಣಕ್ಕೆ ಕೀರ್ತಿ ತಂದಿದ್ದಾರೆ. 

ರೈಲ್ವೆ ಮೈದಾನ ಸ್ಕೇಟಿಂಗ್ ರಿಂಕ್, ಭಯ್ಯಾ ಚೌಕ್, ಸೋಲಾಪುರದಲ್ಲಿ ಜೂನ್ 21ರಂದು ನಡೆದ ಸ್ಪರ್ಧೆಯಲ್ಲಿ ತೈಯಬಾ ಪಠಾಣ ಅತ್ಯುತ್ತಮ ಪ್ರದರ್ಶನ ನೀಡಿ ಎರಡೂ ವಿಭಾಗಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದರು. ಅವರ ಈ ಸಾಧನೆಯನ್ನು ಗುರುತಿಸಿ ಶ್ರೀಲಂಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ ಮಾಡಲಾಗಿದೆ. 

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಶಿಕ್ಷಕರು, ಪೋಷಕರು, ಕ್ರೀಡಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.