ಬೆಳಗಾವಿ

ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಟೇಬಲ್ ಟೆನಿಸ್ ಕ್ರೀಡಾಕೂಟ

ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಟೇಬಲ್ ಟೆನಿಸ್ ಕ್ರೀಡಾಕೂಟ


ಬೆಳಗಾವಿ 29: ಇಲ್ಲಿನ ಎಸ್‌. ಜಿ. ಬಾಳೇಕುಂದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಭಾರತದ ಹಾಕಿ ದಂತಕಥೆ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯಡಾ. ಬಿ. ಆರ್‌. ಪಟಗುಂಡಿ ವಹಿಸಿದ್ದರು. ಉಪಪ್ರಾಚಾರ್ಯ ಡಾ. ಅಶೋಕ್ ಉಳುಗಬಾಳಿ, ಸ್ಟೂಡೆಂಟ್ ವೆಲ್ಫೇರ್ ಡೀನ್ ಡಾ. ಮಂಜುನಾಥ್ ಶರಣಪ್ಪ ನವರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀಧರ ನೇಮಗೌಡ, ಸ್ಪೋರ್ಟ್ಸ ಕೋ-ಆರ್ಡಿನೇಟರ್ ಆನಂದ್ ಬಂಕದ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಂಯೋಜಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  

ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಕ್ರೀಡೆಯ ಮಹತ್ವ, ದೈಹಿಕ ಸದೃಢತೆ ಮತ್ತು ಯುವಜನತೆಯಲ್ಲಿ ಕ್ರೀಡಾಸ್ಫೂರ್ತಿ ಬೆಳೆಸುವ ಅಗತ್ಯತೆಯ ಕುರಿತು ಗಣ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.  

ಟೇಬಲ್ ಟೆನಿಸ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.  ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ