ಬಳ್ಳಾರಿಯ ಬಿಎಂಸಿಆರ್ಸಿಯಲ್ಲಿ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ
National Surgeons Day celebrated at BMCRC, Bellary
ಲೋಕದರ್ಶನ ವರದಿ
ಬಳ್ಳಾರಿ 18: ಕೆಎಸ್ಸಿ-ಎಎಸ್ಐ ಬಳ್ಳಾರಿ ನಗರ ಶಾಖೆ ಹಾಗೂ ಬಿಎಂಸಿಆರ್ಸಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ಸಹಯೋಗದೊಂದಿಗೆ ಬಳ್ಳಾರಿ ವೈದ್ಯಕೀಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ ಸೋಮವಾರ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರರಿಗೆ ಉಪಯುಕ್ತವಾಗುವಂತೆ ಕೇಸ್ ಪ್ರೆಸೆಂಟೇಶನ್ ಹಾಗೂ ಅಪರೂಪದ ಪ್ರಕರಣ ವರದಿ ಕುರಿತು ವಿಶೇಷ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಲಾಗಿತ್ತು.
ಎಎಸ್ಐ ಸಂಸ್ಥೆಯು ಯುವ ಮತ್ತು ಉದಯೋನ್ಮುಖ ಶಸ್ತ್ರಚಿಕಿತ್ಸಕರಿಗೆ ನೀಡುತ್ತಿರುವ ಬೆಂಬಲ ಹಾಗೂ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಡಾ. ಗಡ್ಡಿ ದಿವಾಕರ್ ಕರೆ ನೀಡಿದರು.
ಈ ಶೈಕ್ಷಣಿಕ ಸಂವಾದಗಳು ಮತ್ತು ವೈದ್ಯಕೀಯ ಚರ್ಚೆಗಳು ವಿಶೇಷವಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಲಿಕೆ, ಸೂಕ್ತ ಮಾರ್ಗದರ್ಶನ ಹಾಗೂ ಅವರ ವೃತ್ತಿಪರ ಅಭಿವೃದ್ಧಿಗೆ ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 