ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ-ಒಂದು ದಿನದ ತರಬೇತಿ
ಲೋಕದರ್ಶನ ವರದಿ
ಹಾವೇರಿ ಅ.29 : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೋಟ್ಪಾ ಕಾಯ್ದೆ2003 ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಚಿಕಿತ್ಸಾ ಸೌಲಭ್ಯಗಳ ಕುರಿತು ಜಿಲ್ಲೆಯ ಆಯ್ದ ಪೊಲೀಸ್ ಠಾಣೆಯ ಪಿಎಸ್ಐ, ಎಎಸ್ಐಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಹಾವೇರಿ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಗುರುವಾರ ಜರುಗಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ ಅವರು ಉದ್ಘಾಟನೆ ನೆರವೇರಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ.ಸಂತೋಷ ದಡ್ಡಿ ಮತ್ತು ದಾದಾಪೀರ ಹುಲಿಕಟ್ಟಿ ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಚುಟವಟಿಕೆ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಕೋಟ್ಪಾ ಕಾಯ್ದೆ2003 ಕಾಯ್ದೆ ಅನುಷ್ಠಾನ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಜಗದೀಶ ಪಾಟೀಲ, ಶಹರ ಪೊಲೀಸ್ ಠಾಣೆ ಸಿಪಿಐ ಮೋತಿಲಾಲ್ ಪವಾರ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇತರರು ಉಪಸ್ಥಿತರಿದ್ದರು.