ರಾಷ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 31: ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ರೀಯ ಏಕತಾ ದಿವಸದ ನಿಮಿತ್ತ ರಾಷ್ರದ ಐಕ್ಯತೆ, ಸಮಗ್ರತೆ, ಭದ್ರತೆಯನ್ನು ಕಾಪಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಬೋಧಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ದೇಶದ ನಂತರ ವಿವಿಧ ರಾಜ್ಯಗಳನ್ನು ಭಾರತೀಯ ಒಕ್ಕೂಟದೊಂದಿಗೆ ವೀಲೀನಗೊಳಿಸುವಲ್ಲಿ ಭಾರತದ ಉಕ್ಕಿನ ಮನುಷ್ಯ ಎಂದೇ ಕರೆಯಲಾಗುತ್ತಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪಾತ್ರ ಮಹತ್ವದ್ದಾಗಿದೆ.
ನಮ್ಮ ದೇಶದಲ್ಲಿ ಭಾಷೆ, ವೇಷ , ಭೂಷಣ, ಬೇರೆ ಬೇರೆಯಾಗಿದ್ದರೂ ನಾವೆಲ್ಲರೂ ಭಾರತೀಯರು ಎಂಬ ಒಂದೇ ಭಾವನೆ ನಮ್ಮಲ್ಲಿರಬೇಕು. ದೇಶದ ಏಕತೆ, ಸಮಗ್ರತೆ ಹಾಗೂ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ಜಿ.ಜೆ, ರುದ್ರಣ್ಣಗೌಡ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.