ಶಿರಹಟ್ಟಿಯಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ: ರಕ್ತದಾನ ಶಿಬಿರಕ್ಕೆ ಉತ್ತಮ ಸ್ಪಂದನೆ
ಲೋಕದರ್ಶನ ವರದಿ
ಗದಗ 01: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಮ್ಸ್ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಶ್ರೀ ಜಗದ್ಗುರು ಫಕ್ಕಿರೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜು ಶಿರಹಟ್ಟಿ, ಐಸಿಟಿಸಿ ಕೇಂದ್ರ ತಾಲೂಕಾ ಆಸ್ಪತ್ರೆ ಶಿರಹಟ್ಟಿ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಶಿರಹಟ್ಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನದ ಸಮಾರಂಭ ಹಾಗು ರಕ್ತದಾನ ಶಿಬಿರ ಜರುಗಿತು. ಸಮಾರಂಭವನ್ನು ಉಧ್ಘಾಟಿಸಿ ಮಾತನಾಡಿದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ. ಅರುಂಧತಿ ಕೆ. ರವರು ರಕ್ತದಾನ ಶ್ರೇಷ್ಠದಾನ, ರಕ್ತದಾನ ಜೀವದಾನ, ರಕ್ತದಾನ ಮಹಾದಾನ ಎನ್ನುವಂತೆ ಎಲ್ಲರೂ ಮೂರು ತಿಂಗಳಿಗೆ ಒಂದು ಸಾರಿ ರಕ್ತದಾನ ಮಾಡಬಹುದು, ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ದೇಹದಲ್ಲಿ ಚೈತನ್ಯ ಬರುವುದು. ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಎಲ್ಲರು ಕೈ ಜೋಡಿಸಬೇಕೆಂದು ಹೇಳಿದರು. ಮುಂದುವರೆದು ಮಾತನಾಡಿ ರಕ್ತದಾನದಂತೆ ಅಂಗಾಂಗದಾನವು ಮಹತ್ವದಾಗಿದ್ದು, ದಾನಿಗಳ ಸ್ಮರಣೆ ಮಾಡುವುದು ಸ್ತುತ್ಯಾರ್ಹವಾಗಿದೆಯೆಂದರು.