ಗುಳೇಗುಡ್ಡ

ಮತದಾನಕ್ಕೆ ಉದಾಸೀನತೆ ಬೇಡ

ಮತದಾನಕ್ಕೆ ಉದಾಸೀನತೆ ಬೇಡ
ಗುಳೇದಗುಡ್ಡದ ಬಾಲಕರ ಸರ್ಕಾರಿ ಪಪೂ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗುಳೇದಗುಡ್ಡ: ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನದ ಮಾಡುವ ಸಂವಿಧಾನ ಬದ್ಧ ಹಕ್ಕಾಗಿದ್ದೂ ಅದನ್ನು ಸಮರ​‍್ಕವಾಗಿ ಬಳಸಿಕೊಂಡು ಉತ್ತಮವಾದ ವ್ಯಕ್ತಿಯನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಯುವಕರು ಪ್ರಾಮಣಿಕ ಪ್ರಯತ್ನ ಮಾಡಬೇಕು. ಮತದಾನಕ್ಕೆ ಉದಾಸೀನತೆ ಬೇಡವೆಂದು  ಕಟಗೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಆಯ್‌.ಎನ್‌. ಕುಡಕಿ ಹೇಳಿದರು. 

ಅವರು ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ  ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ರಾಷ್ಟ್ರ ಅಭಿವೃದ್ಧಿಯಾಗಬೇಕಾದರೆ ಉತ್ತಮ ನಾಯಕರನ್ನು ಆಯ್ಕೆ ಮಾಡಿ ಕಳುಹಿಸಬೇಕು. ನನ್ನ ಒಂದು ಮತದಿಂದ ಏನಾಗುತ್ತದೆ ಎಂಬ ಉದಾಸೀನತೆ ತಾಳದೇ ಎಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ತಪ್ಪದೇ ಭಾಗವಹಿಸಿ ಮತ ಚಲಾಯಿಸಬೇಕು ಎಂದು ಹೇಳಿದರು.  

ಕಾಲೇಜಿನ ಪ್ರಾಚಾರ್ಯ ವಿಠ್ಠಲ ಕಳಸಾ ಅಧ್ಯಕ್ಷತೆವಹಿಸಿ ಮಾತನಾಡಿ, ಚುನಾವಣೆಯನ್ನು ಯಶಸ್ವಿಗೊಳಿಸುವಲ್ಲಿ ಯುವಕರ ಅದರಲ್ಲಿಯೂ ವಿದ್ಯಾರ್ಥಿಗಳ ಪಾತ್ರ ಹಿರಿದಾಗಿದೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಮತದಾನಕ್ಕೆ ಸಂಬಂಧಪಟ್ಟಂತೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. 

ತಾಲೂಕು ನೋಡಲ್ ಅಧಿಕಾರಿ ಎಚ್‌.ಎಸ್‌.ಮಡಿವಾಳರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಎನ್‌.ಎಸ್‌. ಹಿರೇಮಠ ಪ್ರತಿಜ್ಞಾ ವಿಧಿ ಬೋಧಿಸಿದರು. ಗಾಯತ್ರಿ ಕಳಸಾ ಪ್ರಾರ್ಥಿಸಿದರು. ವಿ.ವೈ.ಗೌಡರ ಸ್ವಾಗತಿಸಿದರು. ದಯಾನಂದ ಪಟ್ಟಣಶೆಟ್ಟಿ ವಂದಿಸಿದರು. 

ಸುದ್ದಿ ಓದಿ