ಅಕ್ಯುಪಂಕ್ಚರ್ ಸೇವೆಗೆ ರಾಷ್ಟ್ರೀಯ ಮಟ್ಟದ ಗೌರವ; ಕೊಪ್ಪಳದ ಮೊಹಿನ್ ಖಾನ್ಗೆ ಪ್ರಶಸ್ತಿ
National-level honor for acupuncture service; award for Koppal's Mohin Khan
ಕೊಪ್ಪಳ 15: ನಗರದ ಗ್ರೀನ್ ಲೈಫ್ ಅಕ್ಯು ಕೇರ್ ಸಂಸ್ಥೆಯ ಸಂಸ್ಥಾಪಕ ಹಾಗೂ ಅಕ್ಯುಪಂಕ್ಚರ್ ತಜ್ಞ ಮೊಹಿನ್ ಖಾನ್ ಅವರಿಗೆ ಆರೋಗ್ಯ ಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಮಹಾರಾಷ್ಟ್ರದಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿ, ಪ್ರಮಾಣಪತ್ರ ಹಾಗೂ ಟ್ರೋಫಿ ನೀಡಿ ಸನ್ಮಾನಿಸಲಾಯಿತು.
ಮಹಾರಾಷ್ಟ್ರದ ನಾಗಪುರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಂತರರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ನಲ್ಲಿ ಜುಲೈ 11 ಮತ್ತು 12ರಂದು ಆಯುಷ್ಮಾನ್ ಅಕ್ಯುಪಂಕ್ಚರ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಆಯೋಜಿಸಿದ್ದ ಮೊದಲ ರಾಷ್ಟ್ರೀಯ ಅಕ್ಯುಪಂಕ್ಚರ್ ಸಮ್ಮೇಳನದಲ್ಲಿ ಈ ಗೌರವ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸ್ಥೆಯ ರಿಜಿಸ್ಟ್ರಾರ್ ನಾರಾಯಣ ನವಾಲಿ, ಎಂಸಿಎ ಸಂಸ್ಥಾಪಕ ಅಧ್ಯಕ್ಷ ಡಾ. ರೂಮಿ ಫಾದಿರ್ ಭರಂಜಿ ಹಾಗೂ ಆಯುಷ್ಮಾನ್ ಅಕ್ಯುಪಂಕ್ಚರ್ ಕಾಲೇಜು ಮತ್ತು ಆಸ್ಪತ್ರೆಯ ಅಧ್ಯಕ್ಷ ಡಾ. ತ್ರಿದೀಪ್ ಗುಹಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ರಾಷ್ಟ್ರೀಯ ಮಟ್ಟದ ಈ ಸಮ್ಮೇಳನದಲ್ಲಿ ಕೊಪ್ಪಳವನ್ನು ಪ್ರತಿನಿಧಿಸಿದ್ದ ಮೊಹಿನ್ ಖಾನ್ ಅವರು ಪ್ರಶಸ್ತಿ, ಪ್ರಮಾಣಪತ್ರ ಹಾಗೂ ಟ್ರೋಫಿ ಸ್ವೀಕರಿಸಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸಾಧನೆಗೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಅವರನ್ನು ಅಭಿನಂದಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 