ಬಳ್ಳಾರಿಯಲ್ಲಿ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ
ಬಳ್ಳಾರಿ 29: ಪ್ರಶಾಂತ ಚಂದ್ರ ಮಹಾಲನೋಬಿಸ್ ರವರ 129ನೇ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆಯನ್ನು ಬಳ್ಳಾರಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಯಾದ ಎನ್.ಸುನೀಲ್ಕುಮಾರ್ ಪ್ರಶಾಂತ ಚಂದ್ರ ಮಹಾಲನೋಬಿಸ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಸ್ತುತ ಸಾಂಖ್ಯಿಕ ದಿನಾಚರಣೆ ಸುಸಂದರ್ಭದಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದಂತೆ, ಮುಂದಿನ ದಿನಗಳಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 17 ಸುಸ್ಥಿರ ಅಭಿವೃದ್ಧಿ ಗುರಿಗಳ ಪೈಕಿ, ಶಿಕ್ಷಣ, ಆರೋಗ್ಯ ಮತ್ತು ಪೌಷ್ಠಿಕತೆಯಲ್ಲಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮಾರ್ಗದರ್ಶನದಲ್ಲಿ ಗುರುತಿಸಿ ಸಂಬಂಧಿಸಿದ ಇಲಾಖೆಗಳಿಂದ ಗ್ರಾಮ/ತಾಲ್ಲೂಕು/ಜಿಲ್ಲಾ ಮಟ್ಟದ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ವರ್ಷದ ದಿನಾಚರಣೆಗೆ ಕೇಂದ್ರ ಸರ್ಕಾರವು “ಸುಸ್ಥಿರ ಅಭಿವೃದ್ಧಿಗಾಗಿ ಅಗತ್ಯ ದತ್ತಾಂಶ” ಎಂಬ ವಿಷಯವನ್ನು ಆಯ್ಕೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಒಓಖಕಋ ಮಂತ್ರಾಲಯದ ವರ್ಚುವಲ್ (ಗಿಡಿಣಣಚಿಟ) ಮೂಲಕ ನಡೆದ ವಿಡಿಯೋ ಸಂವಾದದಲ್ಲಿ ಭಾಗವಹಿಸಲಾಯಿತು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿಗಳ ಪರವಾಗಿ ಹಾಜರಿದ್ದ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಮಾರುತಿ ತಳವಾರ ಅವರು ಮಾತನಾಡಿ, ಸಾಂಖ್ಯಿಕ ಇಲಾಖೆಯಲ್ಲಿನ ಅಧಿಕಾರಿಗಳು/ನೌಕರರು ನೈಜವಾದ ದತ್ತಾಂಶಗಳನ್ನು ಸಂಗ್ರಹಿಸಿ ವರದಿ ಮಾಡುವುದೇ ಪ್ರೊ. ಪಿ.ಸಿ. ಮಹಾಲನೋಬಿಸ್ ರವರಿಗೆ ಸಲ್ಲಿಸುವ ಗೌರವ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಕಚೇರಿಯ ಸಾಂಖ್ಯಿಕ ಇಲಾಖೆಯ ಅಧಿಕಾರಿ/ನೌಕರರು ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.