ಶಿಗ್ಗಾವ್

ರಾಷ್ಟ್ರಮಟ್ಟದ ಅಂತರ್ಜಾಲ ವಿಚಾರ ಸಂಕಿರಣ

ರಾಷ್ಟ್ರಮಟ್ಟದ ಅಂತರ್ಜಾಲ ವಿಚಾರ ಸಂಕಿರಣ
ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಆರ್ ಆರ್ ಬಿರಾದಾರ ಭಾವಚಿತ್ರ.

ಶಿಗ್ಗಾವಿ 17: ಕೊರೊನಾ ಸೋಂಕು ಭಾರತ ದೇಶದಾದ್ಯಂತ ಹರಡಿ ದೇಶದ ಆರ್ಥಿಕತೆ, ಶಿಕ್ಷಣ, ಆರೋಗ್ಯ ಮುಂತಾದ ವಲಯಗಳ ಮೇಲೆ ತೀವ್ರ ದುಷ್ಪರಿಣಾಮ ಬೀರಿದೆ, ಭಾರತದಲ್ಲಿ ಆರೋಗ್ಯ ಮೂಲಸೌಕರ್ಯಗಳು ತೀವ್ರ ಕೊರತೆಯಲ್ಲಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡದ ಪ್ರಕಾರ ಅವುಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಆರ್ ಆರ್ ಬಿರಾದಾರ ಅವರು ಅಭಿಪ್ರಾಯಪಟ್ಟರು. 

ಪಟ್ಟಣದ ರಂಭಾಪುರಿ ಜಗದ್ಗರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗವು ಆಯೋಜಿಸಿದ ರಾಷ್ಟ್ರಮಟ್ಟದ ಅಂತರ್ಜಾಲ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಸಂಪನ್ಮೂಲ ವ್ಯಕ್ತಿಗಳಾಗಿ ಮಹತ್ವದ ವಿಷಯಗಳನ್ನು ವಿವರಿಸಿದ ಅವರು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡದ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳು ಕೊರತೆಯಲ್ಲಿರುವುದು ಕಂಡು ಬಂದಿದೆ. ಉತ್ತಮ ಗುಣಮಟ್ಟದ ಆರೋಗ್ಯವನ್ನು ಕಾಯ್ದುಕೊಳ್ಳಲು ಮತ್ತು ಸ್ವಾಸ್ಥ್ಯ ಸಮಾಜವನ್ನು ಕಟ್ಟುವಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಪೂರೈಸುವುದು ತುಂಬಾ ಅವಶ್ಶಕವಾಗಿದೆ ಎಂದರು. 

ಕಾಲೇಜಿನ ಪ್ರಾಚಾರ್ಯ ಪ್ರೊ. ಸಿ ಎಚ್ ತಾವರಗೊಂದಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಬಿ ಎಮ್ ಮುಳಗುಂದ, ಪ್ರೊ. ದೀಪಾ ಬಗಾಡೆ, ಸೌಮ್ಯ ರಾಮಾಪುರಮಠ, ಡಾ. ರಶ್ಮಿ ಕುರ್ಸಾಪೂರ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಇದ್ದರು. 

ಭಾರತದಂತ ಹಿಂದುಳಿದ ರಾಷ್ಟ್ರಗಳಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಉತ್ತಮ ಗುಣಮಟ್ಟದ ಆರೋಗ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಹಾಯ ಮಾಡುವುದರ ಜತೆಗೆ, ಲಸಿಕೆ ಹಾಗೂ ಚುಚ್ಚು ಮದ್ದುಗಳನ್ನು ನೀಡಿ, ಸುಂದರ ಸಮಾಜ ನಿರ್ಮಿಸುವಲ್ಲಿ ಪ್ರಯತ್ನಿಸಬೇಕು. ಈ ದಿಶೆಯಲ್ಲಿ ಸರ್ಕಾರ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರೆ ಅಂತರ್‌ರಾಷ್ಟ್ರೀಯ ಸಂಸ್ಥೆಗಳು ಗಂಭೀರವಾಗಿ ಪ್ರಯತ್ನಿಸಬೇಕು ಜೊತೆಗೆ ಇಂದಿನ ಯುವಕರು ಮುಂಚೂಣಿಯಲ್ಲಿ ನಿಂತು ಉತ್ತಮ ಸಮಾಜ ಕಟ್ಟುವಲ್ಲಿ ಮಹತ್ತರ ಪಾತ್ರ ವಹಿಸಬೇಕು.  

ಡಾ. ಆರ್ ಆರ್ ಬಿರಾದಾರ  

ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ  



ಸುದ್ದಿ ಓದಿ