ದಸರಾ ಕ್ರೀಡಾಕೂಟಕ್ಕೆ ನಾವಲಗಿ ತಂಡ ಆಯ್ಕೆ
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 02: ತಾಲ್ಲೂಕಿನ ನಾವಲಗಿ ಗ್ರಾಮದ ಯುವಕರ ತಂಡ ಹಾವೇರಿಯಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ತಂಡವು ಸತತ ಐದನೇ ಬಾರಿಗೆ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಗ್ರಾಮದ ಹಿರಿಯರು ಹಾಗೂ ಗೆಳೆಯರ ಬಳಗ ತಂಡವನ್ನು ಅಭಿನಂದಿಸಿದ್ದಾರೆ.