ಕಾರವಾರ

ನವರಾತ್ರಿ ಉತ್ಸವ: ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಿ

ನವರಾತ್ರಿ ಉತ್ಸವ: ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಿ

ಲೋಕದರ್ಶನ ವರದಿ 

ದಾಂಡೇಲಿ  8: ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಾಂಬೋಟಿ ನಗರ ಪೊಲೀಸ್ ಠಾಣೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.  ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಬಿ. ಗೀರೀಶ್, ನವರಾತ್ರಿ ಉತ್ಸವವನ್ನು ಶಾಂತಿಯುತವಾಗಿ ಆಚರಿಸಬೇಕು. ಶಾಂತಿ, ಸುವ್ಯವಸ್ಥೆ ದೃಷ್ಟಿಯಿಂದ ಉತ್ಸವದ ರೂಪರೇಷೆಗಳ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸಭೆ ಕರೆಯಲಾಗಿದೆ ಎಂದರು.  

ನಗರದಲ್ಲಿ ನಡೆಯುವ ದಾಂಡಿಯಾ ಕಾರ್ಯಕ್ರಮವನ್ನು ರಾತ್ರಿ 10 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು. ಉತ್ಸವದ ಯಶಸ್ಸು ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಮತ್ತು ಸಂಘಟನೆಗಳ ಮುಖಂಡರು ಸಹಕರಿಸಬೇಕು ಎಂದು ಮನವಿ ಮಾಡಿದರು.  

ಸಭೆಯಲ್ಲಿ ಸಾರ್ವಜನಿಕರು, ಸಂಘಟನೆಗಳ ಮುಖಂಡರು, ಸಿಪಿಐ ಶಿವಾನಂದ ಅಂಬಿಗೇರ್, ಪಿಎಸ್‌ಐಗಳಾದ ಶಿವಾನಂದ ನಾವದಗಿ, ಮಹೇಶ್ ಮೆಲಗೇರಿ, ಮಂಜುಳಾ ರಾವಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. 


ಸುದ್ದಿ ಓದಿ