ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ನಜೀಮಾ ಪಠಾಣ್
Nazeema Pathan for State Level Best Lecturer Award
ವಿಜಯಪುರ, ಸೆ. 06: 2026-27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಸಿಕ್ಯಾಬ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ನಜೀಮಾ ಪಠಾಣ್ ಅವರು ಭಾಜನರಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ಬೋಧನಾ ನೈಪುಣ್ಯ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ.
ನಜೀಮಾ ಪಠಾಣ್ ಅವರ ಸಾಧನೆಗೆ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಸಲಾಹುದ್ದೀನ್ ಪುಣೇಕರ್, ಕಾರ್ಯದರ್ಶಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಎ.ಎಸ್. ಪಾಟೀಲ್, ನಿರ್ದೇಶಕ ಡಾ. ಜಿಯಾ ಆಬೀದೀನ್ ಎಸ್. ಪುಣೇಕರ್, ಡೀನ್ ಎನ್.ಎಸ್. ಭೂಸನೂರ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಕೆ.ಎ. ಉಪ್ಪಾರ, ಶಾಖಾಧಿಕಾರಿ ಪ್ರಕಾಶ್ ಗೋಂಗಡಿ, ಪ್ರಾಚಾರ್ಯ ಎಂ.ಎಂ. ಗುರಡಿ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನಜೀಮಾ ಪಠಾಣ್ ಅವರು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಅವರ ಸಾಧನೆ ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಅಭಿನಂದನೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 