ಮುಂಗಾರು ಮಳೆ ಮುನ್ನೆಚ್ಚರಿಕೆ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ-ಜಿಲ್ಲಾಧಿಕಾರಿ ಸ್ನೇಹಲ್ ಆರ್‌

ಮುಂಗಾರು ಮಳೆ ಮುನ್ನೆಚ್ಚರಿಕೆ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ-ಜಿಲ್ಲಾಧಿಕಾರಿ ಸ್ನೇಹಲ್ ಆರ್‌ Necessary measures by the district administration to ensure monsoon rain precautions and drinking wa

ಲೋಕದರ್ಶನ ವರದಿ 

ಧಾರವಾಡ ಜೂ.6: ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಗಳನ್ನು ಜರುಗಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಲಾಗಿದೆ. ಅಲ್ಲದೇ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಪ್ರಸ್ತುತ 22 ಗ್ರಾಮಗಳಲ್ಲಿ 27 ಖಾಸಗಿ ಕೊಳವೆ ಬಾವಿ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ಟ್ಯಾಂಕರ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ. ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ಮಲಪ್ರಭಾ ಜಲಾಶಯದಿಂದ ಕಾಲುವೆಗಳ ಮುಖಾಂತರ 60 ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ.

ಈ ತಾಲ್ಲೂಕಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯ 05 ಸ್ಥಳೀಯ ಸಂಸ್ಥೆಗಳಲ್ಲಿರುವ 100 ವಾರ್ಡುಗಳಿದ್ದು, ಯಾವುದೇ ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ. 80 ವಾರ್ಡುಗಳಲ್ಲಿ ಪ್ರತಿ ದಿನ ನೀರು ಪೊರೈಕೆ ಮಾಡಲಾಗುತ್ತಿದ್ದು, ಉಳಿದ 20 ವಾರ್ಡುಗಳಲ್ಲಿ 2 ರಿಂದ 3 ದಿನಗಳವರೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

05 ಸ್ಥಳೀಯ ಸಂಸ್ಥೆಗಳಲ್ಲಿನ ಕೆರೆಗಳಲ್ಲಿ ಕುಡಿಯುವ ನೀರಿನ ಶೇಖರಣೆ ಸಾಕಾಗುವಷ್ಟು ಇರುವುದರಿಂದ ಪ್ರಸ್ತುತ ಯಾವುದೇ ಸಮಸ್ಯೆ ಉದ್ಭವಿಸಿರುವುದಿಲ್ಲ. ಹುಬ್ಬಳ್ಳಿ ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ 82 ವಾರ್ಡುಗಳಿದ್ದು, ಅದರಲ್ಲಿ 13 ವಾರ್ಡುಗಳಲ್ಲಿ 24ಘಿ7 ನೀರು ಪೊರೈಕೆ ಮಾಡಲಾಗುತ್ತಿದೆ. ಉಳಿದ ವಾರ್ಡುಗಳಲ್ಲಿ 2 ರಿಂದ 7 ದಿನಗಳವರೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.