ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಕೈಗೊಳ್ಳಹುದಾದ ಅಗತ್ಯ ಕ್ರಮಗಳು
Necessary measures the public can take regarding infectious diseases with the onset of the monsoon s
ಧಾರವಾಡ 09: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯೂ, ಚಿಕುನಗುನ್ಯಾ, ಮಲೇರಿಯಾ, ವೈರಲ್ ಜ್ವರ, ಅತಿಸಾರ, ಟೈಫಾಯ್ಡ್, ಕಾಲರಾ ಹಾಗೂ ಇತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ, ವಾರಕ್ಕೊಮ್ಮೆ, ನೀರಿನ ಟ್ಯಾಂಕ್, ಡ್ರಮ್, ಬಕೆಟ್, ಹೂವಿನ ಕುಂಡ ಹಾಗೂ ಬಳಕೆಯಾಗದ ಪಾತ್ರೆಗಳನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳಲು ಪೂರ್ಣತೋಳಿನ ಬಟ್ಟೆ ಧರಿಸಿ, ಸೊಳ್ಳೆಪರದೆ, ಸೊಳ್ಳೆ ನಿವಾರಕ ಕ್ರೀಮ್ ಅಥವಾ ಕ್ವಾಯಿಲ್ಗಳನ್ನು ಬಳಸಿ. ಜ್ವರ, ತೀವ್ರ ತಲೆನೋವು, ಕಣ್ಣುಗಳ ನೋವು, ಮೈ-ಕೈ ನೋವು, ವಾಂತಿ ಅಥವಾ ಚರ್ಮದ ಮೇಲೆ ಕೆಂಪು ಕಲೆಗಳು ಕಂಡುಬಂದರೆ ಸ್ವಯಂ ಓಷಧಿ ಸೇವಿಸದೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು.
ಕುಡಿಯುವ ನೀರನ್ನು ಕುದಿಸಿ ಅಥವಾ ಶುದ್ಧೀಕರಿಸಿ ಕುಡಿಯಿರಿ. ತಾಜಾ ಹಾಗೂ ಬಿಸಿಯಾದ ಆಹಾರವನ್ನು ಮಾತ್ರ ಸೇವಿಸಿ. ತೆರೆದ ಆಹಾರ ಪದಾರ್ಥಗಳನ್ನು ಸೇವಿಸುವುದನ್ನು ತಪ್ಪಿಸಿ, ಊಟಕ್ಕೂ ಮುನ್ನ ಮತ್ತು ಶೌಚಾಲಯ ಬಳಕೆಯ ನಂತರ ಸಾಬೂನಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಿರಿ.
ಜಿಲ್ಲಾ ಆರೋಗ್ಯ ಇಲಾಖೆ ಮಳೆಗಾಲದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಲಾರ್ವಾ ಸಮೀಕ್ಷೆ, ಫಾಗಿಂಗ್, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಅಗತ್ಯ ವೈದ್ಯಕೀಯ ಸೇವೆಗಳನ್ನು ನಿರಂತರವಾಗಿ ನಡೆಸುತ್ತಿದೆ. ಸಾರ್ವಜನಿಕರು ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪರಶುರಾಮ ಎಫ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 