ವಿಶ್ವ ಕೂಟದಲ್ಲಿ ಭಾರತದ ಚಿನ್ನದ ಕೊರತೆ ನೀಗಿಸಿದ ನೀರಜ್ ಚೋಪ್ರಾ

ಹಂಗೇರಿ 28: ಕೋಟ್ಯಂತರ ಭಾರತೀಯರ ನಿರೀಕ್ಷೆ ಹುಸಿಯಾಗಿಸದ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾರ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಜಾವೆಲಿನ್ ಎಸೆತದಲ್ಲಿ ಚಾಂಪಿಯನ್ ಆಟಗಾರ ನೀರಜ್ ಐತಿಹಾಸಿಕ ಬಂಗಾರಕ್ಕೆ ಮುತ್ತಿಟ್ಟಿದ್ದಾರೆ. ಅರ್ಹತಾ ಸುತ್ತಿನಲ್ಲಿ ಒಂದೇ ಎಸೆತಕ್ಕೆ ಫೈನಲ್ ಹಾಗೂ 2024ರ ಪ್ಯಾರಿಸ್ ಒಲಿಂಪಿಕ್ಸ್ಗೆ ಟಿಕೆಟ್ ಪಡೆದುಕೊಂಡಿದ್ದ 25ರ ನೀರಜ್, ಭಾನುವಾರ ಮಧ್ಯರಾತ್ರಿ ನಡೆದ ಫೈನಲ್ನಲ್ಲಿ 88.17 ಮೀ. ದೂರಕ್ಕೆ ಎಸೆದು ಇತಿಹಾಸ ಸೃಷ್ಟಿಸಿದರು. ಒಲಿಂಪಿಕ್ಸ್ ಬಳಿಕ ವಿಶ್ವ ಕೂಟದಲ್ಲೂ ಭಾರತದ ಚಿನ್ನದ ಕೊರತೆಯನ್ನು ನೀಗಿಸಿದರು. 

ಜಾವೆಲಿನ್ ಫೈನಲ್ನಲ್ಲಿ ನೀರಜ್ ಜೊತೆ ಕಿಶೋರ್ ಜೆನಾ ಹಾಗೂ ಕನರ್ಾಟಕದ ಡಿ.ಪಿ.ಮನು ಕೂಡಾ ಸ್ಪಧರ್ಿಸಿದ್ದರು. ಆದರೆ ಅವರಿಬ್ಬರಿಗೂ ಪದಕ ಕೈಗೆಟುಕಲಿಲ್ಲ. ಮೊದಲ ಎಸೆತವನ್ನು ಘೌಲ್ ಮಾಡಿಕೊಂಡ ನೀರಜ್, 2ನೇ ಪ್ರಯತ್ನದಲ್ಲಿ 88.17 ಮೀ. ದೂರ ದಾಖಲಿಸಿ ಅಗ್ರಸ್ಥಾನ ಕಾಯ್ದುಕೊಂಡರು. ಬಳಿಕ 3ನೇ ಪ್ರಯತ್ನದಲ್ಲಿ 86.32 ಮೀ. ದೂರಕ್ಕೆ ಜಾವೆಲಿನ್ ಎಸೆದರೂ, ಅಗ್ರಸ್ಥಾನ ಕಳೆದುಕೊಳ್ಳಲಿಲ್ಲ. 4ನೇ ಪ್ರಯತ್ನದಲ್ಲಿ ಜಾವೆಲಿನ್ 86.64 ಮೀ. ದೂರದಲ್ಲಿ ಬಿತ್ತು. 5ನೇ ಪ್ರಯತ್ನದಲ್ಲಿ 87.73 ಮೀ. ದೂರ ದಾಖಲಿಸಿದ ಚೋಪ್ರಾ, ಕೊನೆ ಎಸೆತದಲ್ಲಿ 83.98 ಮೀ. ದೂರ ಎಸೆಯಲಷ್ಟೇ ಶಕ್ತರಾದರು. ಚೋಪ್ರಾಗೆ ಕಠಿಣ ಪೈಪೋಟಿ ನೀಡಿದ ಪಾಕಿಸ್ತಾನದ ಅರ್ಶದ್ ನದೀಂ ತಮ್ಮ 3ನೇ ಪ್ರಯತ್ನದಲ್ಲಿ 87.82 ಮೀ. ದೂರಕ್ಕೆ ಎಸೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ಚೆಕ್ ಗಣರಾಜ್ಯದ ಜಾಕುಬ್ ವೆಡ್ಲೆಜ್ 86.67 ಮೀ. ದೂರಕ್ಕೆ ಜಾವೆಲಿನ್ ಎಸೆದು ಕಂಚಿನ ಪದಕ ತಮ್ಮದಾಗಿಸಿಕೊಂಡರು. 

ಫೈನಲ್ನಲ್ಲಿ ಕಿಶೋರ್ ಹಾಗೂ ಮನು ಪದಕ ಗೆಲ್ಲಲು ವಿಫಲರಾದರೂ, ತಮ್ಮ ಪ್ರದರ್ಶನದ ಮೂಲಕ ಗಮನ ಸೆಳೆದರು. 5ನೇ ಪ್ರಯತ್ನದಲ್ಲಿ 84.77 ಮೀ. ದೂರ ಎಸೆದು ತಮ್ಮ ವೈಯಕ್ತಿಕ ಶ್ರೆ?ಷ್ಠ ದೂರ ದಾಖಲಿಸಿದ ಕಿಶೋರ್ 5ನೇ ಸ್ಥಾನ ಪಡೆದುಕೊಂಡರೆ, ಮನು 6ನೇ ಪ್ರಯತ್ನದಲ್ಲಿ 84.14 ಮೀ. ದೂರ ಎಸೆದು 6ನೇ ಸ್ಥಾನ ಪಡೆದರು. 

1983ರಿಂದಲೂ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕಿದು 3ನೇ ಪದಕ. 2003ರ ಪ್ಯಾರಿಸ್ ವಿಶ್ವ ಕೂಟದ ಮಹಿಳೆಯರ ಲಾಂಗ್ಜಂಪ್ನಲ್ಲಿ ಅಂಜು ಬಾಬಿ ಜಾಜರ್್ ಮೊದಲ ಪದಕ ತಂದುಕೊಟ್ಟಿದ್ದರು. ಕಳೆದ ವರ್ಷ ಅಮೆರಿಕದಲ್ಲಿ ನಡೆದಿದ್ದ ಕೂಟದಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಬೆಳ್ಳಿ ಪದಕ ಗೆದ್ದಿದ್ದರು.

ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿ ಚೋಪ್ರಾ ರನ್ನು ಅಭಿನಂದಿಸಿದ್ದಾರೆ

 ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಪ್ರತಿಭಾವಂತ ನೀರಜ್ ಚೋಪ್ರಾ ಅವರು ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿರಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದು ಮೋದಿ ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.