ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ: 2 ಖಾಸಗಿ ಆಸ್ಪತ್ರೆಗಳು ಬಂದ್
ಕಲಬುರಗಿ, ಏ.9, ಕೊರೊನಾ ವೈರಸ್ ರೋಗ ಲಕ್ಷಣಗಳಿರುವವರ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿರುವುದಾಗಿ ಜಿಲ್ಲಾಧಿಕಾರಿ ಶರತ್.ಬಿ ತಿಳಿಸಿದ್ದಾರೆ.ಶಂಕಿತ ಕೊರೊನಾ ರೋಗಿಗಳನ್ನು ಬಹಳಷ್ಟು ದಿನಗಳ ಕಾಲ ಆಸ್ಪತ್ರೆ ಗಳಲ್ಲಿ ದಾಖಲಿಸಿಕೊಂಡು ರೋಗ ಉಲ್ಬಣಿಸಿದ ಬಳಿಕ ಇಎಸ್ಐ ಮತ್ತು ಜಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ.
ಸ್ಟಾರ್ ಆಸ್ಪತ್ರೆ ಸಿಬ್ಬಂದಿಯು ಕೊರೊನಾ ರೋಗ ಲಕ್ಷಣವುಳ್ಳ ರೋಗಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ನೀಡಿರುವುದಿಲ್ಲ. ಜೊತೆಗೆ ಆಸ್ಪತ್ರೆಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳನ್ನು ಇಟ್ಟುಕೊಂಡಿಲ್ಲ.ಈ ಹಿನ್ನೆಲೆಯಲ್ಲಿ ಸ್ಟಾರ್ ಆಸ್ಪತ್ರೆ ಯನ್ನು ಬಂದ್ ಮಾಡಲಾಗಿದೆ. ಅದೇ ರೀತಿ ಬಹಮನಿ ಆಸ್ಪತ್ರೆಯನ್ನು ಬಂದ್ ಮಾಡಿ, ಸಿಬ್ಬಂದಿಯನ್ನು ಕ್ವಾರೈಂಟೀನ್ ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವ ಯತ್ನ ನಡೆದಿದೆ. ಇದು ಸ್ವತಃ ಜಿಲ್ಲಾಡಳಿತ ಅಥವಾ ಜಿಲ್ಲಾಧಿಕಾರಿಗಳ ಮೇಲೆ ನಡೆಸಿರುವ ಹಲ್ಲೆಯಂತಾಗಿದೆ. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಸರ್ಕಾರದ ಆದೇಶದ ಮೇರೆಗೆ ಆರೋಗ್ಯ ತಪಾಸಣೆಗೆ ಮನೆ-ಮನೆಗೆ ಭೇಟಿ ನೀಡುತ್ತಾರೆ. ಜನಗಣತಿ, ಎನ್ ಪಿ ಆರ್ ಮತ್ತಿತರ ಯಾವುದೇ ಸರ್ವೇ ಮಾಡಿಸುತ್ತಿಲ್ಲ. ಅವರಿಗೆ ಸಹಕಾರ ನೀಡಬೇಕೆಂದು ಎಂದು ಅವರು ಕೋರಿದ್ದಾರೆ.ದೆಹಲಿ ಮತ್ತು ಇತರೆಡೆ ತೆರಳಿದ್ದ ಜಮಾತ್ ತಬ್ಲೀಘಿ ಜಮಾತ್ ಸದಸ್ಯರು ಮುಕ್ತವಾಗಿ ಮುಂದೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಇನ್ನು ನಗರದ ಆಸ್ಪತ್ರೆಗಳಲ್ಲಿರುವ ಆರೋಗ್ಯ ಕಾರ್ಯಕರ್ತೆಯರು ರೋಗಿಗಳನ್ನು ಸರಿಯಾಗಿ ಪ್ರಾಥಮಿಕ ಪರೀಕ್ಷೆ ಕೂಡ ನಡೆಸದೆ, ಇಎಸ್ಐ ಆಸ್ಪತ್ರೆ ಗೆ ಹೋಗುವಂತೆ ಶಿಫಾರಸ್ಸು ಮಾಡುತ್ತಿರುವುದು ತಿಳಿದು ಬಂದಿದೆ. ಈ ಸಂಬಂಧ ನಿರ್ಲಕ್ಷ್ಯ ತೋರುವ "ಡಿ" ಗ್ರೂಪ್ ನಿಂದ ಹಿಡಿದು ವೈದ್ಯರ ವರೆಗೆ ಆರೋಗ್ಯ ತುರ್ತುಪರಿಸ್ಥಿತಿ ಉಲ್ಲಂಘನೆ ಆರೋಪದ ಮೇಲೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಇನ್ನು, ಕಲಬುರಗಿಯಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಡಾವಣೆಗಳ ಜನ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ತಮ್ಮ ಬಡಾವಣೆಗಳಿಗೆ ತರಕಾರಿ ಬಂಡಿ ಬರದಂತೆ ಕಲಬುರಗಿಯ ಗಂಗಾನಗರದಲ್ಲಿ ರಸ್ತೆ ಬ್ಲಾಕ್ ಮಾಡಿದ್ದಾರೆ.ತರಕಾರಿ ಮಾರಾಟಗಾರರು ಪಾಲಿಕೆ ನಿಯಮ ಅನುಸರಿಸುತ್ತಿಲ್ಲ ಎಂದು ಆರೋಪಿಸಿ ರಸ್ತೆ ಬಂದ್ ಮಾಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ಹಣ್ಣಿನ ವ್ಯಾಪಾರಿಯಾಗಿದ್ದ 65 ವರ್ಷದ ವೃದ್ಧ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಈಗಾಗಲೇ ಸೋಂಕಿಗೆ ಇಬ್ಬರೂ ಬಲಿಯಾದ ಹಿನ್ನೆಲೆಯಲ್ಲಿ ಬಡಾವಣೆ ಜನ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 