ನೇತಾಜಿ ಸುಭಾಷ್ ಚಂದ್ರಬೋಸ್ ಅವರ 129 ನೆಯ ಜಯಂತಿ ಆಚರಣೆ
Netaji Subhas Chandra Bose's 129th birth anniversary celebration
ಲೋಕದರ್ಶನ ವರದಿ
ಬಳ್ಳಾರಿ. 17 : ವಿದ್ಯಾರ್ಥಿ ಶಿಕ್ಷಣ ಸಂಸ್ಕೃತಿ ಸೇವಾ ಸಮಿತಿ, ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ಬಳ್ಳಾರಿ, ವತಿಯಿಂದ ಡಾ.ರಾಜಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 129 ನೆಯ ಜಯಂತಿ ಆಚರಣೆ ಮಾಡಲಾಯಿತು.
ಮುಖ್ಯ ವಕ್ತಾರರಾದ, ನಿವೃತ್ತ ಉಪನ್ಯಾಸಕರಾದ ಎನ್. ಬಸವರಾಜ್ ರವರು ಮಾತನಾಡುತ್ತಾ ನೇತಾಜಿ ಸುಭಾಸ್ ಚಂದ್ರಬೋಸ್ ಅವರು ದೇಶದ ಸ್ವಾತಂತ್ರ ಹೋರಾಟದಲ್ಲಿ ಮಾಡಿದ ಅಪ್ರತಿಮ ಸಾಧನೆಯನ್ನು, ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಪರಿಣಾಮವಾಗಿ ಬ್ರಿಟಿಷರು ಭಾರತದಿಂದ ಪಲಾಯನ ಗೈದರು. ಅವರ ಸೇವೆ ಅಪಾರವಾದುದು. ಪ್ರತಿಯೊಬ್ಬ ಭಾರತೀಯನು ಅವರ ಸೇವೆಯನ್ನು ಸದಾ ಸ್ಮರಿಸಬೇಕೆಂದರು. ಮುಖ್ಯ ಅತಿಥಿಗಳಾದ ಚೆಳ್ಳಗುರ್ಕಿ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಗುರುಗಳಾದ ಎಂ.ವೇಣುಗೋಪಾಲ ರವರು ಮಾತನಾಡುತ್ತಾ ವಿಧ್ಯಾರ್ಥಿಗಳು ನನ್ನ ದೇಶ, ನನ್ನ ಜನ ಸೇವಾಕಾರ್ಯದಲ್ಲಿ ಸದಾ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ನಗರ ಅಧ್ಯಕ್ಷರಾದ ಜಗದೀಶ್ ಕನುಗೋಲು ರವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ, ಕೊನೆಗೆ ವಂದನೆ ಸಲ್ಲಿಸಿದರು. ನಾಗರಾಜರವರು ಕಾರ್ಯಕ್ರಮ ನಿರ್ವಹಿಸಿದರು. ಆರಂಭದಲ್ಲಿ ನೇತಾಜಿ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ವಿದ್ಯಾರ್ಥಿ ಶಿಕ್ಷಣ ಸಂಸ್ಕೃತಿ ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಮಾರ್ಚೇಡ್ ಮಲ್ಲಿಕಾರ್ಜುನರವರು ವೇದಿಕೆಯಲ್ಲಿದ್ದರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ಅಧ್ಯಾಪಕರು, ಅ.ಭಾ.ವಿ.ಪ. ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 