ಅಂತರರಾಷ್ಟ್ರೀಯ

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ನೆತನ್ಯಾಹು ಶ್ಲಾಘನೆ

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ನೆತನ್ಯಾಹು ಶ್ಲಾಘನೆ

ಮಾಸ್ಕೋ, ಅ. 1: ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಘಟನೆ ವೇಳೆ 174 ಪ್ರಯಾಣಿಕರು ಮತ್ತು ಸಿಬ್ಬಂದಿಯ ಜೀವ ಉಳಿಸಲು ಧೈರ್ಯದಿಂದ ಕಾರ್ಯನಿರ್ವಹಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶ್ಲಾಘಿಸಿದ್ದಾರೆ.

ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನವು ಬುಧವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಬಳಿಕ ವಿಮಾನವು ಸೌದಿ ಅರೇಬಿಯಾದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತು. ವಿಮಾನಯಾನ ಸಂಸ್ಥೆಯ ಪ್ರಕಾರ, ಹಾರಾಟದ ವೇಳೆ ಇಬ್ಬರು ಪೈಲಟ್‌ಗಳ ನಡುವೆ ಜಗಳ ನಡೆದಿತ್ತು.

ಘಟನೆಯ ಸಂದರ್ಭದಲ್ಲಿ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಗಂಭೀರವಾಗಿ ಗಾಯಗೊಂಡಿದ್ದರೂ, ದಾಳಿಕೋರನನ್ನು ಎದುರಿಸಿ ಕಾಕ್‌ಪಿಟ್ ಬಾಗಿಲು ತೆರೆಯಲು ಸಾಧ್ಯವಾಗುವಂತೆ ಮಾಡಿದರು. ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ ದಾಳಿಕೋರನನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ನೆತನ್ಯಾಹು ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನೆತನ್ಯಾಹು, “ಅಸಾಧಾರಣ ಧೈರ್ಯ ತೋರಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ನನ್ನ ವಂದನೆಗಳು” ಎಂದು ಹೇಳಿದ್ದಾರೆ.

ಮಚ್ಚಾರ್ ಅವರ ಧೈರ್ಯಶಾಲಿ ಕ್ರಮದಿಂದ ವಿಮಾನದಲ್ಲಿದ್ದ 174 ಜನರ ಜೀವ ಉಳಿಯಿತು. ಇವರಲ್ಲಿ ಇಸ್ರೇಲಿ ನಾಗರಿಕರು ಸೇರಿದಂತೆ ವಿವಿಧ ದೇಶಗಳ ಪ್ರಯಾಣಿಕರು ಇದ್ದರು ಎಂದು ನೆತನ್ಯಾಹು ತಿಳಿಸಿದ್ದಾರೆ.

ಸುದ್ದಿ ಓದಿ