ಮುಂದಗೋಡ

ಅಧ್ಯಕ್ಷ ಸ್ಥಾನಕ್ಕೆ ನೇತ್ರಾ ರಾಜೀನಾಮೆ

ಅಧ್ಯಕ್ಷ ಸ್ಥಾನಕ್ಕೆ ನೇತ್ರಾ ರಾಜೀನಾಮೆ

ಲೋಕದರ್ಶನ ವರದಿ 

ಮುಂಡಗೋಡ:ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ನೇತ್ರಾ ಜಾಡರ ಗುರುವಾರ ರಾಜೀನಾಮೆ ಸಲ್ಲಿಸಿದರು. 

ಕೆಲಸದ ಒತ್ತಡದಿಂದ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಶಿರಸಿ ಉಪವಿಭಾಗಾಧಿಕಾರಿ ಆರ್‌.ದೇವರಾಜ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ವೇಳೆ ಗೌರೀಶ ಹರಿಜನ, ಮಂಜು ಕೋಣನಕೇರಿ, ಪುಟ್ಟಪ್ಪ ಗುಲ್ಯಾನವರ, ರಾಮಣ್ಣ ಗುಲ್ಯಾನವರ ಉಪಸ್ಥಿತರಿದ್ದರು. ಶಿರಸಿ ಉಪವಿಭಾಗಾಧಿಕಾರಿ ಆರ್‌.ದೇವರಾಜ ರಾಜೀನಾಮೆ ಪತ್ರ ಸ್ವೀಕರಿಸಿದರು. 


ಸುದ್ದಿ ಓದಿ