ರಾಯಬಾಗದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಜನಸಾಮಾನ್ಯರಿಗೆ ಅನುಕೂಲ : ಪ್ರಿಯಾಂಕಾ ಜಾರಕಿಹೊಳಿ
ರಾಯಬಾಗ 6: ಹಸಿವಿನಿಂದ ಯಾರೂ ಬಳಲಬಾರದು ಎಂಬ ಉದ್ದೇಶದಿಂದ ಇಂದು ಕಾಂಗ್ರೆಸ ಸರ್ಕಾರ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಪಟ್ಟಣದ ನೀರಾವರಿ ಕಚೇರಿ ಹತ್ತಿರ ನೂತನವಾಗಿ ಪ್ರಾರಂಭಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ಗಳು ಬಡವರು, ದೈನಂದಿನ ಕೂಲಿ ಕಾರ್ಮಿಕರು, ರಿಕ್ಷಾ ಚಾಲಕರು, ವಿದ್ಯಾರ್ಥಿಗಳು, ಪ್ರಯಾಣಿಕರು ಹಾಗೂ ಹೋಟೆಲ್ ಕಾರ್ಮಿಕರಿಗೆ ಅತ್ಯಂತ ಅನುಕೂಲವಾಗಿವೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪಪಂ ಮುಖ್ಯಾಧಿಕಾರಿ ಸಂಜೀವ ಮಂಗಳ ಅವರ ಉಪಸ್ಥಿತಿಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಶಿವನಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಪಾಟೀಲ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.