ಹೊರಗುತ್ತಿಗೆ ನೌಕರರ ಸಂಘಕ್ಕೆ ಹೊಸ ಸಾರಥಿ: ಯಲಬುರ್ಗಾ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಕುರಿ ಆಯ್ಕೆ!
ಯಲಬುರ್ಗಾ 23: ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಸಂಘದ ಸಭೆಯಲ್ಲಿ ಮಂಜುನಾಥ ಹನುಮಂತಪ್ಪ ಕುರಿ ಅವರನ್ನು ಯಲಬುರ್ಗಾ ತಾಲೂಕು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಘದ ರಾಜ್ಯಾಧ್ಯಕ್ಷ ಸುಧಾಕರ ಹಾಗೂ ಜಿಲ್ಲಾಧ್ಯಕ್ಷ ನಾಗರಾಜ್ ಕಂಟ್ಯಪ್ ಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಜರುಗಿತು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಹನುಮಂತಪ್ಪ ಕುರಿ ಅವರಿಗೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಹಕ್ಕುಗಳು, ಸಮಸ್ಯೆಗಳು ಹಾಗೂ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಂಘಟನಾತ್ಮಕವಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು.