ಹುಲೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ನೂತನ ಎಸ್ಡಿಎಂಸಿ ರಚನೆ
New SDMC Formed for Huluru Government Model Primary School
ಲಕ್ಷ್ಮೇಶ್ವರ 07: ತಾಲ್ಲೂಕಿನ ಹುಲೂರು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ರಚನೆ ಮಾಡಲಾಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಗ್ರಾಮದ ಎಲ್ಲ ಸಮುದಾಯಗಳ ಗುರುಹಿರಿಯರು ಹಾಗೂ ಶಾಲಾ ಶಿಕ್ಷಕರ ಸಮ್ಮುಖದಲ್ಲಿ ಒಮ್ಮತದಿಂದ ನಡೆಸಲಾಯಿತು. ನೂತನ ಎಸ್ಡಿಎಂಸಿ ಅಧ್ಯಕ್ಷರಾಗಿ ರಮೇಶ್ ಶಂಕರ್ಪ ಮೂಕಿ ಹಾಗೂ ಉಪಾಧ್ಯಕ್ಷರಾಗಿ ಹಜಾರೆಸಾಬ್ ಖಾದರಸಾಬ್ ನದಾಫ್ ಅವರನ್ನು ಆಯ್ಕೆ ಮಾಡಲಾಯಿತು. ಇದರೊಂದಿಗೆ ಇನ್ನೂ 16 ಸದಸ್ಯರನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ರಮೇಶ್ ಮೂಕಿ ಹಾಗೂ ಉಪಾಧ್ಯಕ್ಷ ಹಜಾರೆಸಾಬ್ ನದಾಫ್ ಮಾತನಾಡಿ, ತಮ್ಮನ್ನು ಎಸ್ಡಿಎಂಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಗ್ರಾಮಸ್ಥರು, ಗುರುಹಿರಿಯರು ಹಾಗೂ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ಸಿಎಆರ್ಿ ಎಸ್ಡಿಎಂಸಿ, ನಿಕಟಪೂರ್ವ ಅಧ್ಯಕ್ಷ ಭರಮಪ್ಪ ಹಳ್ಳಿಗೇರ, ಪರಮೇಶಗೌಡ ಪಾಟೀಲ, ಎಂ.ಎಂ. ಗಾಡಗೋಳಿ, ನಾಗಪ್ಪ ಮೂಕಿ, ಸಿದ್ದಪ್ಪ ಕ್ಯಾತಣ್ಣವರ, ಡಾ. ಸಾಸಲವಾಡ ಹಾಗೂ ಗ್ರಾಮದ ಗುರುಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 