ಕರೋನ ಸೋಂಕಿಗೆ ನ್ಯೂಜಿಲೆಂಡ್‌ನಲ್ಲಿ ಮೊದಲ ಬಲಿ
ವೆಲ್ಲಿಂಗ್ಟನ್, ಮಾರ್ಚ್ 29, ನ್ಯೂಜಿಲೆಂಡ್‌ನಲ್ಲಿ ಕರೊನ ಸೋಂಕಿನ ಮೊದಲ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಸರ್ಕಾರ ಭಾನುವಾರ ಪ್ರಕಟಿಸಿದೆ.ಮೃತ ಮಹಿಳೆ 70 ರ ಹರೆಯದವರು ಎಂದು ದೃಡಪಡಿಸಿರುವುದಾಗಿ ಆರೋಗ್ಯ ಸಚಿವಾಲಯದ ಆರೋಗ್ಯ ಮಹಾನಿರ್ದೇಶಕ ಡಾ. ಆಶ್ಲೇ ಬ್ಲೂಮ್‌ಫೀಲ್ಡ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದಕ್ಷಿಣ ದ್ವೀಪದ ವೆಸ್ಟ್ ಕೋಸ್ಟ್ ಪ್ರದೇಶದ ಗ್ರೇಮೌತ್ ಆಸ್ಪತ್ರೆಯಲ್ಲಿ ಮಹಿಳೆ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ . ಅವರಿಗೆ ಶುಕ್ರವಾರ ಬೆಳಿಗ್ಗೆ ವೈರಸ್ ಧನಾತ್ಮಕ ಪರೀಕ್ಷೆ ಮಾಡಲಾಗಿತ್ತು. ಇವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ 21 ಸಿಬ್ಬಂದಿಯನ್ನು ಈಗ ಸ್ವಯಂ-ಪ್ರತ್ಯೇಕತೆಯಲ್ಲಿಡಲಾಗಿದೆ. ನ್ಯೂಜಿಲೆಂಡ್ ನಲ್ಲಿ ಭಾನುವಾರ ಹೊಸದಾಗಿ ದೃಡಪಡಿಸಿದ 60 ಮತ್ತು ಮತ್ತು ಮೂರು ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು ಇದು ದೇಶದಲ್ಲಿ ಈವರೆಗೆಸೋಂಕಿನ ಸಂಖ್ಯೆ 514 ಕ್ಕೆ ಏರಿಕೆಯಾಗಿದೆ ಒಟ್ಟು 9 ಜನರು ಪ್ರಸ್ತುತ ಆಸ್ಪತ್ರೆಯಲ್ಲಿದ್ದಾರೆ.ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್, ಸಾವಿನ ಪ್ರಕರಣವೇ ನ್ಯೂಜಿಲೆಂಡ್ ಈ ಸೋಂಕು ತಡೆಗಟ್ಟಲು ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.ಆದಾಗ್ಯೂ, ದೃ ಡಪಡಿಸಿದ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ. ಜನರು ಮನೆಯಲ್ಲಿಯೇ ಇದ್ದು ರೋಗ ಹರಡದಂತೆ ಪ್ರತಿಯೊಬ್ಬರು ತಮ್ಮ ಪಾತ್ರವನ್ನು ನಿರ್ವಹಿಸಬೇಕು ಎಂದೂ ಅರ್ಡೆರ್ನ್ ಹೇಳಿದ್ದಾರೆ .
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 