ಹುಲಗೂರು ದರ್ಗಾದಲ್ಲಿ ಹೊಸ ವಿದ್ಯುತ್ ವ್ಯವಸ್ಥೆ ಆರಂಭ
New electrical system launched at Hulagur Dargah
ಶಿಗ್ಗಾವಿ, ಜು.21: ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಹುಲಗೂರು ಗ್ರಾಮದ ಸೈಯದ್ ಹಜರತ್ ಶಾ ಖಾದ್ರಿ ದರ್ಗಾ ಆವರಣದಲ್ಲಿ ವಿದ್ಯುತ್ ಸುರಕ್ಷತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಸ್ಕಾಂ ವತಿಯಿಂದ ಸುಮಾರು 12 ಲಕ್ಷ ವೆಚ್ಚದಲ್ಲಿ ಹೊಸ ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ತಂತಿಗಳ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಯಿತು.
ದರ್ಗಾದಲ್ಲಿ ಮಾತನಾಡಿದ ದರ್ಗಾ ಅಧ್ಯಕ್ಷ ಸೈಯದ್ ಅಜ್ಜಿಂಪೀರ್ ಖಾದ್ರಿ, ಪ್ರತಿವರ್ಷ ಲಕ್ಷಾಂತರ ಭಕ್ತರು ದರ್ಗಾಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸುರಕ್ಷಿತ ವಿದ್ಯುತ್ ವ್ಯವಸ್ಥೆ ಅಗತ್ಯವಾಗಿತ್ತು. ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳು ಹಾಳಾಗಿದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಸ್ಕಾಂ ವತಿಯಿಂದ ಹೊಸ ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.
ಸುಮಾರು 12 ಲಕ್ಷ ವೆಚ್ಚದಲ್ಲಿ 11 ಮೀಟರ್ ಎತ್ತರದ ವಿದ್ಯುತ್ ಕಂಬಗಳು ಹಾಗೂ ಅಗತ್ಯ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇದರಿಂದ ದರ್ಗಾಕ್ಕೆ ಆಗಮಿಸುವ ಭಕ್ತರಿಗೆ ಸುರಕ್ಷಿತ ಹಾಗೂ ಸುಗಮ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.
ದರ್ಗಾದ ಅಭಿವೃದ್ಧಿ ಕಾರ್ಯಗಳಿಗೆ ಕೆಲವರು ಅನಗತ್ಯ ಅಡ್ಡಿಪಡಿಸುತ್ತಿದ್ದು, ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ದರ್ಗಾ ಎಲ್ಲ ಧರ್ಮಗಳ ಭಕ್ತರ ಭಾವೈಕ್ಯದ ಕೇಂದ್ರವಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ದರ್ಗಾ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಚಿವ ಜಾರಕಿಹೊಳಿ ಅವರು 6 ಲೈನ್ ರಸ್ತೆ ನಿರ್ಮಾಣಕ್ಕೂ ?5 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ. ದರ್ಗಾ ಅಭಿವೃದ್ಧಿಗೆ ಸಹಕರಿಸಿದ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸೈಯದ್ ಅಬ್ದುಲ್ ಹಸನ್ ಖಾದ್ರಿ, ಸೈಯದ್ ಯಾಸೀನ್ಪೀರ್ ಖಾದ್ರಿ, ಸೈಯದ್ ವಲಿವುಲ್ಲಾ ಖಾದ್ರಿ, ಸೈಯದ್ ಸುಲ್ತಾನ್ಪೀರ್ ಖಾದ್ರಿ, ಸೈಯದ್ ಪೀರ್ಬಾಷಾ ಖಾದ್ರಿ, ಸಲಿಂ ಫಾರೂಕಿ, ಸಿರಾಜ್ ಮುಲ್ಲಾ, ಶೇಖಣ್ಣ ಗಣಾಚಾರಿ, ಅಣ್ಣಪ್ಪ ನಡತಟ್ಟಿ, ರವಿ ಕೊಣಪ್ಪನವರ, ಮಲ್ಲಿಕಾರ್ಜುನ ದೇಸಾಯಿ, ವಿಜಯಗೌಡ ಪೊಲೀಸ್ಗೌಡ್ರ, ದಯಾನಂದ ಮೆಣಸಿನಕಾಯಿ, ಸಿರಾಜ್ ಅಹ್ಮದ್ ಗುಳೇದಗುಡ್ಡ, ಶೇಖಪ್ಪ ಅತ್ತಿಗೇರಿ ಸೇರಿದಂತೆ ದರ್ಗಾದ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 