ಯಲ್ಲಮ್ಮ ಭಕ್ತರ ಸಂಚಾರಕ್ಕೆ ಹೊಸ ಚೈತನ್ಯ ಶಿರಸಿ- ಮುಂಡಗೋಡ ಸವದತ್ತಿ ನೂತನ ಬಸ್ ಸೇವೆಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ
ಲೋಕದರ್ಶನ ವರದಿ
ಮುಂಡಗೋಡ 14 : ಧಾರ್ಮಿಕ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ತೆರಳುವ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಆರಂಭಿಸಲಾದ ಚೈತನ್ಯ ಶಿರಸಿ- ಮುಂಡಗೋಡ ಸವದತ್ತಿ ನೂತನ ಬಸ್ ಸೇವೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಸ್ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಈ ಹೊಸ ಸಾರಿಗೆ ಸೇವೆ ಬಹಳ ಉಪಯುಕ್ತವಾಗಲಿದೆ. ವಿಶೇಷವಾಗಿ ಸವದತ್ತಿಗೆ ತೆರಳುವ ಭಕ್ತರು ಇನ್ನು ಮುಂದೆ ಸುಲಭವಾಗಿ, ಸುರಕ್ಷಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಪ್ರಯಾಣಿಸಬಹುದಾಗಿದೆ. ಸಾರ್ವಜನಿಕರು ಸರ್ಕಾರಿ ಸಾರಿಗೆ ಸೇವೆಯ ಸದುಪಯೋಗವನ್ನು ಪಡೆದು, ಈ ಸೇವೆಯನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರವಿಗೌಡ ಪಾಟೀಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿಯ ತಾಲೂಕು ಅಧ್ಯಕ್ಷ ದೇವು ಪಾಟೀಲ್, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಸಿ. ಗಲಬಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮ್ಮದ್ ಗೌಸ್ ಮಕಾನದಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಧರ್ಮರಾಜ ನಡಿಗೇರ್, ರಾಜು ಗುಬ್ಬಕನವರ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ವಾಯ್ ಪಿ ಭುಜಂಗಿ , ಪರಶುರಾಮ್ ತಶೀಲ್ದಾರ, ಅಲ್ಲಿಖಾನ ಫಠಾಣ,ಗೋಪಾಲ ಪಾಟೀಲ್, ರಜಾ ಫಠಾಣ, ರಫೀಕ್ ಇನಾಮದಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.