ಕಾಂಗ್ರೆಸ್ ಪಕ್ಷಕ್ಕೆ ಹೊಸ ಮುಖಂಡರ ಸೇರೆ​‍್ಡ

ಕಾಂಗ್ರೆಸ್ ಪಕ್ಷಕ್ಕೆ ಹೊಸ ಮುಖಂಡರ ಸೇರೆ​‍್ಡ  New leaders join the Congress party

ವಿಜಯಪುರ 11 : ಪಕ್ಷ ಸಂಘಟನೆಗೆ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.  ನಗರದಲ್ಲಿ ಶನಿವಾರ ಕಾತ್ರಾಳ ಗ್ರಾಮದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರೆ​‍್ಡಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದ್ದು, ಹೊಸ ಮುಖಂಡರ ಸೇರೆ​‍್ಡಯಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ದೊರೆಯಲಿದೆ ಎಂದರು.  

ಹಳಬರು ಹಾಗೂ ಹೊಸಬರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದ ಅವರು, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರೆ​‍್ಡಯಾದ ಮುಖಂಡರು ಮಾತನಾಡಿ, ಸಚಿವ ಎಂ.ಬಿ. ಪಾಟೀಲ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ಶಾಸಕ ಸುನೀಲಗೌಡ ಪಾಟೀಲ ಅವರ ಮಾರ್ಗದರ್ಶನದಿಂದ ಪ್ರೇರಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ​‍್ಡಯಾಗಿರುವುದಾಗಿ ಹೇಳಿದರು.  

ಕಾರ್ಯಕ್ರಮದಲ್ಲಿ ಕಾತ್ರಾಳ ಗ್ರಾಮದ ಹಿರಿಯ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಡಾ. ಶ್ರೀಶೈಲ ಕೋಕಟನೂರ ಅವರ ನೇತೃತ್ವದಲ್ಲಿ ಹಣಮಂತ ಕೋಕಟನೂರ, ಮಹಾದೇವ ಕೋಕಟನೂರ, ನಾಗಪ್ಪ ಕೋಕಟನೂರ, ಸಿದ್ರಾಯ ನಾಯಮಗೌಡ, ಮಲ್ಲಿಕಾರ್ಜುನ ಬಾಡಗಿ, ರಾಮಪ್ಪ ಕೋಕಟನೂರ, ಸಿದ್ರಾಯ ಕೋಕಟನೂರ, ಭೀಮಪ್ಪ ದುಂಡಪ್ಪ ಕೋಕಟನೂರ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರೆ​‍್ಡಯಾದರು. ಅವರನ್ನು ಸುನೀಲಗೌಡ ಪಾಟೀಲ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.  

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಡಿ. ಪಡಸಲಗಿ, ಎಸ್‌.ಡಿ. ಗುಗ್ಗರಿ, ಬಾಳಪ್ಪ ಪಡಸಲಗಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಇಮ್ತಿಯಾಜ್ ಜಮಾದಾರ, ಮಹಮ್ಮದ್ಸಾಬ್ ಜಮಾದಾರ, ಗ್ಯಾರಂಟಿ ಸಮಿತಿ ಸದಸ್ಯ ಲಾಲಸಾಬ್ ಜಮಾದಾರ, ಸುರೇಶ್ ಚಿಕ್ಕಲಕಿ, ಹಣಮಂತ ಗಲಗಲಿ, ಇಬ್ರಾಹಿಂ ಗುರಾಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.