ಸಾರ್ವಜನಿಕ ಸಾರಿಗೆಗೆ ಹೊಸ ವೇಗ: ಪಟ್ಟಣಕ್ಕೆ 6 ಹೊಸ ಬಸ್ಗಳ ಚಾಲನೆ
New momentum for public transport: 6 new buses launched for the town
ಬ್ಯಾಡಗಿ, ಸೆ.15: ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಆರು ಹೊಸ ಬಸ್ಗಳ ಸಂಚಾರಕ್ಕೆ ಶಾಸಕ ಬಸವರಾಜ ಶಿವಣ್ಣನವರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಬಹುದಿನಗಳಿಂದ ಬಸ್ಗಳ ಕೊರತೆಯಿಂದ ಗ್ರಾಮೀಣ ಭಾಗದ ಜನರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತೊಂದರೆ ಅನುಭವಿಸುತ್ತಿದ್ದರು. ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಸಮರ್ಕ ಬಸ್ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ಇದೀಗ ಆರು ಹೊಸ ಬಸ್ಗಳ ಸಂಚಾರ ಆರಂಭವಾಗಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.
ಹೊಸ ಬಸ್ಗಳು ಪಟ್ಟಣದಿಂದ ದೂರದ ಗ್ರಾಮೀಣ ಪ್ರದೇಶಗಳಿಗೆ ಸಂಚರಿಸಲಿದ್ದು, ಇದರಿಂದ ಪಟ್ಟಣದೊಂದಿಗೆ ಗ್ರಾಮಗಳ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಆರೋಗ್ಯ ಸೇವೆಗಾಗಿ ಪಟ್ಟಣಕ್ಕೆ ಬರುವ ಗ್ರಾಮೀಣ ಜನರಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ಸೇವೆ ದೊರೆಯುವ ನೀರೀಕ್ಷೆಯಿದೆ.
‘ಬಸ್ಗಳ ಸಂಖ್ಯೆಯನ್ನು ಹೆಚ್ಚಿಸುವುದಷ್ಟೇ ಸಾಲದು. ಅವು ನಿಗದಿತ ಸಮಯಕ್ಕೆ ಸರಿಯಾಗಿ ಸಂಚರಿಸುವಂತೆ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವಹಿಸಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷ ಸುರೇಶ ಹುಲಬತ್ತಿ, ರಮೇಶ ಕೋಟಿಯವರ, ಡಿ.ಎಚ್. ಬುಡ್ಡನಗೌಡ್ರ, ಮಾರುತಿ ಅಚ್ಚಿಗೇರಿ, ಮೆಲಗಿರಿಯಪ್ಪ ಕಾಕೋಳ, ಮಲ್ಲಿಕಾರ್ಜುನ ಕರಿಲಿಂಗಪ್ಪ, ಡಿಪೋ ಮ್ಯಾನೇಜರ್ ಅಡರಗಟ್ಟಿ, ಗ್ಯಾರಂಟಿ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 