ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
New office bearers of the Teachers' Association honored
ತಾಳಿಕೋಟಿ 02 : ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು. ಮಂಗಳವಾರ ಮುದ್ದೇಬಿಹಾಳದಲ್ಲಿ ಇಲಾಖೆಯ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಸರಳ ಸನ್ಮಾನದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ಸಾವಳಗಿ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿ ಆರಿ್ಬ.ದಮ್ಮೂರಮಠ ಅವರು ಇಲಾಖೆ ವತಿಯಿಂದ ಸನ್ಮಾನಿಸಿ ಮಾತನಾಡಿ ಸಂಘದ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿರುವುದು ಸಂತೋಷದ ವಿಷಯವಾಗಿದೆ ನಿಮಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಅದನ್ನು ಬಳಸಿಕೊಂಡು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಇಸಿಓ ಗಳಾದ ಸುರೇಶ ಹಿರೇಮಠ, ಮೊಹಮದ್ ಇಲ್ಯಾಸ್ ಬಾಗವಾನ, ಬಿ.ಆರಿ್ಸ. ಕಾಶಿನಾಥ್ ಸಜ್ಜನ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಬಿ.ಟಿ. ವಜ್ಜಲ್,ಉಪಾಧ್ಯಕ್ಷ ತಾರಾ ಲಮಾಣಿ, ಮಹಿಳಾ ಉಪಾಧ್ಯಕ್ಷೆ ರೇಣುಕಾ ಆಲೂರ, ಪ್ರಧಾನ ಕಾರ್ಯದರ್ಶಿ ಸುರೇಶ ಬೀರಗೊಂಡ, ಕೋಶಾಧ್ಯಕ್ಷ ರಮೇಶಕುಮಾರ ಹಿಪ್ಪರಗಿ, ಮಹಿಳಾ ಸಹ ಕಾರ್ಯದರ್ಶಿ ಸರಸ್ವತಿ ಬನ್ನೆಟ್ಟಿ, ಸಹ ಕಾರ್ಯದರ್ಶಿಗಳಾದ ಅಲ್ತಾಫ್ ನಗಾರ್ಚಿ,ಎನ್.ಕೆ.ಸಿಪಾಯಿ, ಮಹಿಳಾ ಸಂಘಟನಾ ಕಾರ್ಯದರ್ಶಿ ನೀಲಮ್ಮ ಮೈಲೇಶ್ವರ, ಸಂಘಟನಾ ಕಾರ್ಯದರ್ಶಿ ಶ್ರೀಶೈಲ ನಾಯ್ಕೋಡಿ, ಶಿಕ್ಷಕಿಯರಾದ ಸುಮಂಗಲಾ ಕೋಳೂರ,ಡಾ.ಅನಿತಾ ಸಜ್ಜನ ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 