ಮನರಂಜನೆ

ಪುನೀತ್ ಅಗಲಿಕೆ ಸುದ್ದಿ ಅರಮನೆಗೆ ದುಃಖ ತಂದಿತ್ತು : ಯದುವೀರ ಒಡೆಯರ್

ಪುನೀತ್ ಅಗಲಿಕೆ ಸುದ್ದಿ ಅರಮನೆಗೆ ದುಃಖ ತಂದಿತ್ತು : ಯದುವೀರ ಒಡೆಯರ್

ಬೆಂಗಳೂರು, ನ. 16  ಮೈಸೂರು ಅರಮನೆಗೂ ಡಾ. ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮೈಸೂರು ರಾಜವಂಶಸ್ಥ  ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
 
ಪುನೀತ ನಮನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿ, ಡಾ. ರಾಜ್ ಅವರ ಐತಿಹಾಸಿಕ ಚಿತ್ರಗಳು ನಮ್ಮ ರಾಜವಂಶದ ಬಗೆಗಿನ ಕುತೂಹಲವನ್ನು ಹೆಚ್ಚಿಸಿತು ಎಂದರು.
 
ಪುನೀತ್ ಅಗಲಿಕೆಯ ಸುದ್ದಿ ಅರಮನೆಗೆ ದುಃಖ ತಂದಿತ್ತು.  ಇಂತಹ ನೋವನ್ನು ಭರಿಸುವ ಶಕ್ತಿಯನ್ನು ಡಾ. ರಾಜ್ ಕುಟುಂಬಕ್ಕೆ ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಆಶಿಸಿದರು.

ಸುದ್ದಿ ಓದಿ