ಪತ್ರಿಕೆಗಳು ಪ್ರಜಾಪ್ರಭುತ್ವದ ಜೀವಾಳ: ಮಹಾದೇವ ಹಾದಿಮನಿ
Newspapers are the lifeblood of democracy: Mahadeva Hadimani
ಬೀಳಗಿ 05 : ಪತ್ರಿಕೆಗಳು ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಜನರಲ್ಲಿ ಜ್ಞಾನ, ಬುದ್ಧಿವಂತಿಕೆ ಹಾಗೂ ಸಾಮಾಜಿಕ ಜಾಗೃತಿಯನ್ನು ಬೆಳೆಸುವ ಪ್ರಮುಖ ಮಾಧ್ಯಮಗಳಾಗಿವೆ ಎಂದು ಡಿ.ಎಸ್.ಎಸ್.ಎಫ್.ಐ ನಿರ್ದೇಶಕ ಮಹಾದೇವ ಹಾದಿಮನಿ ಹೇಳಿದರು. ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾ ಘಟಕದ ವತಿಯಿಂದ ಜಿ.ಎಲ್.ಬಿ.ಸಿ.ಐ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಪತ್ರಿಕೆಗಳು ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಶಕ್ತಿಯಾಗಿದ್ದು, ಸಮಾಜದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಓದುವ ಅಭ್ಯಾಸದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ತಿಳಿಸಿದರು. ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣಗೌಡ ಪಾಟೀಲ ಮಾತನಾಡಿ, ಪತ್ರಿಕೆಗಳು ನ್ಯಾಯ ಮತ್ತು ಸತ್ಯದ ಪರವಾಗಿ ನಿಂತಿರುವುದರಿಂದ ಜನರ ವಿಶ್ವಾಸ ಗಳಿಸಿವೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಪಿ. ಕ್ಲಬ್ ಜಿಲ್ಲಾ ಅಧ್ಯಕ್ಷ ಡಾ. ಸೈಯದ್ ಎಚ್. ನದಾಫ್ ವಹಿಸಿದ್ದರು. ಬಿಚ್ಚುಗತ್ತಿ ಖಾಜಾಹುಸೇನ್, ವಿನೋದ ಹತ್ತಳ್ಳಿ, ಹನುಮಂತ ಸಣಮನಿ, ಸಿದ್ದು ಸಾರಾವರಿ, ಸಿದ್ದು ಮಾದರ, ಮುತ್ತು ವಸ್ತ್ರದ, ಪ್ರಕಾಶ ಸುಣಗಾರ, ಡಾ. ಡಿ.ಎಂ. ವಾಲೀಕಾರ, ಶಿವಪ್ಪ ಗಾಳಿ, ಅಬೂಶಾಮ ಖಾಜಿ, ಡಾ. ಮಲ್ಲಿಕಾರ್ಜುನ ಹಳ್ಳೂರ, ಅರವಿಂದ ಮೋದಿ, ಸುಭಾಷ್ ಚಲವಾದಿ, ಮಲ್ಲಯ್ಯ ಹಿರೇಮಠ, ರಾಜು ಹಾದಿಮನಿ, ಡೊಂಗ್ರಿಸಾಬ್ ವಾಲೀಕಾರ, ಸಲೀಂ ನದಾಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 