ಧಾರವಾಡ - ಹುಬ್ಬಳ್ಳಿ

ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ

ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ

ಹುಬ್ಬಳ್ಳಿ 19 : ಬಸವ ಕೇಂದ್ರದವರು ರವಿವಾರ ಜುಲೈ 21ರಂದು ಸಂಜೆ 4 ಗಂಟೆಗೆ ಗೋಕುಲ ರಸ್ತೆ, ಮುರಾರ್ಜಿನಗರ 2ನೇ ಹಂತ, ಬಸವ ಕೇಂದ್ರದ ವಿ.ಎಂ.ಕೊಟಗಿ ಬಸವ ಸಂಸ್ಕೃತಿ ಶಾಲೆಯಲ್ಲಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.  

ಸವದತ್ತಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಂಶೋಧಕರಾದ ಡಾ. ಬಾಳಪ್ಪ ಚಿನಗುಡಿ ಅವರು ಉಪನ್ಯಾಸ ನೀಡುವರು. ಧಾರವಾಡ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಂಘದ ಗೌರವಾಧ್ಯಕ್ಷ ಮಹಾರುದ್ರ​‍್ಪ ಪಡೇಸೂರ, ಹುಬ್ಬಳ್ಳಿ ತಾಲೂಕಾಧ್ಯಕ್ಷ ಮಾರುತಿ ಭರಮಪ್ಪ ಹಡಪದ, ಮಹಿಳಾ ಘಟಕದ ತಾಲೂಕಾಧ್ಯಕ್ಷ ಶಾಂತವ್ವ ಶಿವಾನಂದ ಹಡಪದ ಅವರು ಅತಿಥಿಗಳಾಗಿ ಭಾಗವಹಿಸುವರು. ಬಸವಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅಧ್ಯಕ್ಷತೆ ವಹಿಸುವರು. ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಂದು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ವಿನಂತಿಸಿದ್ದಾರೆ. 


ಸುದ್ದಿ ಓದಿ