ನಿಖಿಲ್ ವಿವಾಹ: ಸಹೃದಯದ ಮಾತುಗಳನ್ನಾಡಿದ ಮುಖ್ಯಮಂತ್ರಿಗೆ ಮನದಾಳದ ಧನ್ಯವಾದ- ಕುಮಾರಸ್ವಾಮಿ
"ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ"
ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಗುಲ್ಲೆಬ್ಬಿಸಿದವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರ ವಿವಾಹ ಈ ಹಿಂದೆ ನಿಗದಿಪಡಿಸಿದಂತೆ ಏಪ್ರಿಲ್ 17ರಂದು ರಾಮನಗರದಲ್ಲಿ ನಡೆದಿತ್ತು. ಲಾಕ್‌ಡೌನ್ ನಡುವೆಯೇ ಸರ್ಕಾರದಿಂದ ವಿಶೇಷ ಅನುಮತಿ ಪಡೆದು ವಿವಾಹವನ್ನು ಅತ್ಯಂತ ಸರಳ ರೀತಿಯಲ್ಲಿ ನೆರವೇರಿಸಲಾಗಿತ್ತು. ಆದರೆ ಈ ಮದುವೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ ಎಂದು ಕೆಲವು ಮಾಧ್ಯಮಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಮಾತ್ರವಲ್ಲ ಸುದ್ದಿಗೋಷ್ಠಿಯೊಂದರಲ್ಲಿ ಈ ಬಗ್ಗೆ ಮುಖ್ಯಮಂತ್ರಿಯವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ನಿಖಿಲ್ ವಿವಾಹದಲ್ಲಿ ನಿಯಮಗಳನ್ನು ಉಲ್ಲಂಘಿಸಿಲ್ಲ. ಮದುವೆಗೆ ಸರ್ಕಾರ ಅನುಮತಿ ನೀಡಿತ್ತು. ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿದ್ದರು. ಇದಕ್ಕೆ ಈಗ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 