ಸಂಕೇಶ್ವರ

ಬಿಜೆಪಿ ಅಭ್ಯರ್ಥಿಯಾಗಿ ನಿಖಿಲ ಉಮೇಶ ಕತ್ತಿ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿಯಾಗಿ ನಿಖಿಲ ಉಮೇಶ ಕತ್ತಿ ನಾಮಪತ್ರ ಸಲ್ಲಿಕೆ

ಸಂಕೇಶ್ವರ 18: ಹುಕ್ಕೇರಿ ಮತಕ್ಷೇತ್ರಕ್ಕೆ  ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ ಉಮೇಶ ಕತ್ತಿ ಯವರು ಇಂದು ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುಂಚೆ ತಮ್ಮ ತಾಯಿಯ ಆಶೀರ್ವಾದ ಪಡೆದುಕೊಂಡು ತಮ್ಮ ಅಪಾರ ಕಾರ್ಯಕರ್ತರ ಬೆಂಬಲದೊಂದಿಗೆ ತಹಸೀಲ್ದಾರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಗರದ ಗಣ್ಯವ್ಯಕ್ತಿ ಅಪ್ಪಸಾಹೇಬ ಶಿರಕೋಳಿ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ರಾಜೇಂದ್ರ ಪಾಟೀಲ, ಗಜಾನನ ಕೊಳ್ಳಿ ನಾಮಪತ್ರ ಸಲ್ಲಿಸುವಾಗ ಉಪಸ್ಥಿತರಿದ್ದರು. 


ಸುದ್ದಿ ಓದಿ