ವಾಲಿಬಾಲ್ ಕ್ರೀಡಾಕೂಟದಲ್ಲಿ ನಿಕಿತಾ ಗುಳೇದ್ ಪ್ರಥಮ ಸ್ಥಾನ
ಇಂಡಿ 23: ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸಾಲೋಟಗಿ ಗ್ರಾಮದ ಶ್ರೀ ಶಿವಯೋಗೇಶ್ವರ ಕನ್ನಡ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ನಿಕಿತಾ ಗುಳೇದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜೆ.ಎಸ್. ಕಲ್ಯಾಣಿ ಹಾಗೂ ಮಂಡಳಿಯ ಸದಸ್ಯರು, ಮುಖ್ಯ ಗುರುಗಳು ಎಲ್ಲ ಶಿಕ್ಷಕ ವೃಂದದವರು ಅಭಿನಂದಿಸಿದರು.