ಕಾಡು ಅಣಬೆ ಸಾಂಬಾರು ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ
Nine members of the same family fall ill after consuming wild mushroom curry
ಬ್ಯಾಡಗಿ, ಜು. 31: ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಕಾಡು ಅಣಬೆಯಿಂದ ತಯಾರಿಸಿದ ಸಾಂಬಾರು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಮಂದಿ ಅಸ್ವಸ್ಥಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಬಂಗೇರ ಕುಟುಂಬದ ಸದಸ್ಯರು ಶನಿವಾರ ಹೊಲಕ್ಕೆ ತೆರಳಿದ್ದ ವೇಳೆ ಹೊಲದ ಬದಿಯಲ್ಲಿ ಬೆಳೆದಿದ್ದ ಕಾಡು ಅಣಬೆಗಳನ್ನು ಸಂಗ್ರಹಿಸಿ ಮನೆಗೆ ತಂದಿದ್ದರು. ಬಳಿಕ ಅದರಿಂದ ಸಾಂಬಾರು ತಯಾರಿಸಿ ರಾತ್ರಿ ಊಟ ಮಾಡಿದ್ದರು.
ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ಕುಟುಂಬದ ಒಂಬತ್ತು ಮಂದಿಗೆ ಹೊಟ್ಟೆನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬ್ಯಾಡಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಬಿಜೆಪಿ ಯುವ ಮುಖಂಡ ಎಂ.ಎಸ್. ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಅಲ್ಲದೆ ವೈದ್ಯರೊಂದಿಗೆ ಚರ್ಚಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 