ನಿರ್ಭಯಾ ಪ್ರಕರಣ : ಕ್ಷಮಾದಾನ ಅರ್ಜಿ ತಿರಸ್ಕರಿಸಲು ಕೇಂದ್ರ ಶಿಫಾರಸ್
ನವದೆಹಲಿ, ಜನವರಿ 17, ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದ್ದರೂ ಇದನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸ್ ಸಹ ಮಾಡಿದೆ.
ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿ ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ದೂರದ ಸಿಂಗಾಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಎಲ್ಲಾ 6 ಮಂದಿಯನ್ನು ಬಂಧಿಸಿದ್ದರೂ ಒಬ್ಬ ಬಾಲಾಪರಾಧಿ ಎಂಬ ಕಾರಣಕ್ಕೆ ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿ ಹೊರ ಬಂದಿದ್ದಾನೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗುತ್ತಿದೆ. ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿ ಇದೇ 22ರಂದು ನೇಣಿಗೇರಿಸಲು ಆದೇಶ ಮಾಡಿತ್ತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 