ನಿಸಾರ್ ಅಹಮದ್ ಅಂಗನವಾಡಿಗೆ ಭೇಟಿ
ಕಾರವಾರ 17 : ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಮಂಗಳವಾರ ಕಾರವಾರದ ಗಾಂಧೀ ನಗರ ಅಂಗನವಾಡಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ.ಜಿ, ಡಿಡಿಪಿಐ ಲತಾ ನಾಯಕ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗೆಜ್ಜಿ ಮತ್ತಿತರರು ಇದ್ದರು.