ರಾಷ್ಟ್ರೀಯ

ನ.15ರಂದು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಔಪಚಾರಿಕವಾಗಿ ಆಯ್ಕೆಯಾಗಲಿರುವ ನಿತೀಶ್‌

ನ.15ರಂದು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಔಪಚಾರಿಕವಾಗಿ ಆಯ್ಕೆಯಾಗಲಿರುವ ನಿತೀಶ್‌

ಪಾಟನಾ, 13: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ನ.15ರಂದು ಎನ್‌ಡಿಎ ಶಾಸಕಾಂಕ ಪಕ್ಷದ ನಾಯಕರನ್ನಾಗಿ ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ.

ಶುಕ್ರವಾರ ತಮ್ಮ ಮನೆಯಲ್ಲಿ ನಡೆದ ಹೊಸದಾಗಿ ಆಯ್ಕೆಯಾದ ಎನ್‌ಡಿಎ ಶಾಸಕರು ಮತ್ತು ಹಿರಿಯ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್‌ ಕುಮಾರ್‌, ತಾವು ನ.15ರಂದು 12.30ಕ್ಕೆ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರನ್ನಾಗಿಸಲು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಗಿದೆ. ಹೊಸ ಸರ್ಕಾರ ರಚನೆಯ ಎಲ್ಲಾ ವಿವರಗಳನ್ನು ಅಂತಿಮಗೊಳಿಸಲಾಗಿದೆ ಎಂದರು. 

ಎನ್‌ಡಿಎ ಸಭೆಯಲ್ಲಿ ಎಲ್ಲಾ ಔಪಚಾರಿಕತೆಗಳನ್ನು ಪೂರೈಸಿದ ನಂತರ ನ.15ರಂದು ಅವಿರೋಧವಾಗಿ ಆಯ್ಕೆಯಾದ ಶಾಸಕಾಂಗ ಪಕ್ಷದ ನಾಯಕ ರಾಜ್ಯಪಾಲ ಫಗು ಚೌಹಾನ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಪ್ರಸ್ತಾವ ಇರಿಸಲಿದ್ದಾರೆ ಎಂದರು. 

ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವಧಿ ನ.29ರಂದು ಮುಕ್ತಾಯಗೊಳ್ಳಲಿದೆ. 

ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ, ಮಾಜಿ ಮುಖ್ಯಮಂತ್ರಿ ಮತ್ತು ಎಚ್‌ಎಎಂ ಅಧ್ಯಕ್ಷ ಜೀತನ್ ರಾಮ್, ವಿಐಪಿ ಅಧ್ಯಕ್ಷ ಮುಖೇಶ್ ಸಾಹ್ನಿ, ಬಿಜೆಪಿ ರಾಜ್ಯ ಅಧ್ಯಕ್ಷ ಸಂಜಯ್ ಜೈಸ್ವಾಲ್, ಕೇಂದ್ರ ಸಚಿವ ನಿತ್ಯಾನಂದ್ ರೈ, ಜೆಡಿಯು ರಾಜ್ಯ ಕಾರ್ಯಕಾರಿ ಅಧ್ಯಕ್ಷ ಅಶೋಕ್ ಚೌಧರಿ, ಜೆಡಿಯು ಹಿರಿಯ ನಾಯಕ ಆರ್‌ಸಿಪಿ ಸಿಂಗ್, ಪಕ್ಷದ ಹಿರಿಯ ನಾಯಕರಾದ ವಿಜಯ್ ಕುಮಾರ್ ಚೌಧರಿ ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಸಂಜಯ್ ಜಾ ಉಪಸ್ಥಿತರಿದ್ದರು. 

ಸುದ್ದಿ ಓದಿ