ಆಧ್ಯಾತ್ಮಿಕ ಪ್ರವಚನಕ್ಕೆ ಸಿದ್ಧಗೊಂಡ ನಿವಾಳಖೇಡ ಗ್ರಾಮ

ಆಧ್ಯಾತ್ಮಿಕ ಪ್ರವಚನಕ್ಕೆ ಸಿದ್ಧಗೊಂಡ ನಿವಾಳಖೇಡ ಗ್ರಾಮ

ದೇವರಹಿಪ್ಪರಗಿ:ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರ ಶಿಷ್ಯರಾದ ಬಾಲಗಾಂವ ಗ್ರಾಮದ ಗುರುದೇವಾಶ್ರಮದ ಪ.ಪೂ ಶ್ರೀ ಡಾ.ಅಮೃತಾನಂದ ಮಹಾಸ್ವಾಮಿಗಳ ‘ಆಧ್ಯಾತ್ಮಿಕ ಪ್ರವಚನ’ಕ್ಕೆ ತಾಲೂಕಿನ ನಿವಾಳಖೇಡ ಗ್ರಾಮದಲ್ಲಿ ಚಾಲನೆ ನೀಡುವ ಮೂಲಕ ನೂತನವಾಗಿ ನಿರ್ಮಾಣವಾದ ಶ್ರೀಮಠದ ಉದ್ಘಾಟನೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಮುಖಂಡರುಗಳಾದ ಸಾಹೇಬಗೌಡ ರೆಡ್ಡಿ, ರಮೇಶ ದಳವಾಯಿ ಸೇರಿದಂತೆ ಹಲವಾರು ಮುಖಂಡರು ತಿಳಿಸಿದ್ದಾರೆ.ತಾಲೂಕಿನ ನಿವಾಳಖೇಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸಿದ್ಧಕೃಪಾ ಮಲ್ಲಿಕಾರ್ಜುನ ಮಹಾಂತಮಠದ ಆವರಣದಲ್ಲಿ ಶ್ರೀಗಳ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. 

ನ.30ರಿಂದ ಪ್ರತಿ ದಿನ ಬೆಳಿಗ್ಗೆ 6-30 ರಿಂದ 7-30ರ  ವರೆಗೆ ಪ್ರವಚನ ನಡೆಯಲಿದೆ.ಡಿ.10ರಂದು ಶ್ರೀ ಮಠದ ಉದ್ಘಾಟನಾ ಕಾರ್ಯಕ್ರಮವನ್ನು ವಿಜಯಪುರದ ಜ್ಞಾನ ಯೋಗಾಶ್ರಮದ ಅಧ್ಯಕ್ಷರಾದ ಪ.ಪೂ ಬಸವಲಿಂಗ ಮಹಾಸ್ವಾಮಿಗಳು ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದ್ದು. ಇಲಕಲ್ ಚಿತ್ತರಗಿ ಮಠದ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಮ.ನಿ.ಪ್ರ ಗುರುಮಹಾಂತ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಹಾಗೂ ಸ್ಥಳೀಯ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರು, ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಸ್ವಾಮೀಜಿಗಳು, ಪ್ರಮುಖರು ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಲಿದ್ದಾರೆ ಎಂದು  ತಿಳಿಸಿದ್ದಾರೆ. 


ಸುದ್ದಿ ಓದಿ