ಅಂತರರಾಷ್ಟ್ರೀಯ

ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿ ಇಲ್ಲ: ಪುಟಿನ್

ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿ ಇಲ್ಲ: ಪುಟಿನ್

ಮಾಸ್ಕೋ 24 :  ರಷ್ಯಾವು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ್ದು, ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿ ಇಲ್ಲ ಎಂದು ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.ಉಕ್ರೇನ್‌ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆಯೇ ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿಲ್ಲ ಎಂದು ಹೇಳಿದರು.ರಷ್ಯಾದ ಕ್ರಮದಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದರೆ ಮುಂದಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪುಟಿನ್ ಇತರ ದೇಶಗಳಿಗೆ ಎಚ್ಚರಿಕೆ ನೀಡಿದರು. ಇದರ ಹೊರತಾಗಿ ಉಕ್ರೇನ್‌ನ ಲುಹಾನ್ಸ್ಕ್ ಪ್ರದೇಶದಲ್ಲಿ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಹೇಳಿದೆ.ರಷ್ಯಾ ಮತ್ತು ಉಕ್ರೇನ್ ನಡುವಿನ ಮಿಲಿಟರಿ ಕಾರ್ಯಾಚರಣೆ ಮುಂದುವರೆದಿದ್ದು, ರಷ್ಯಾದ ಶೆಲ್ ದಾಲಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ೯ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಘರ್ಷದ ಮಧ್ಯೆ, ಭಾರತ ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂಇಎ ಮೂಲಗಳು ತಿಳಿಸಿವೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದರು. ಉಕ್ರೇನ್‌ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ರಷ್ಯಾ ಅಧ್ಯಕ್ಷರು ಉಕ್ರೇನ್ ಅನ್ನು ವಶಪಡಿಸಿಕೊಳ್ಳುವ ಗುರಿಯನ್ನು ಹೊಂದಿಲ್ಲ ಎಂದು ಹೇಳಿದರು. ರಷ್ಯಾದ ಕ್ರಮದಲ್ಲಿ ಹಸ್ತಕ್ಷೇಪ ಮಾಡಲು ಪ್ರಯತ್ನಿಸಿದರೆ ಮುಂದಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪುಟಿನ್ ಇತರ ದೇಶಗಳಿಗೆ ಎಚ್ಚರಿಕೆ ನೀಡಿದರು.

ಸುದ್ದಿ ಓದಿ