ಬೈಲಹೊಂಗಲ

ಬಿಜೆಪಿ ಅಭ್ಯರ್ಥಿ ಯಾರೇ ಆದರೂ ಗೆಲುವಿಗೆ ಶ್ರಮಿಸಿ: ಸುಭಾಷ ಪಾಟೀಲ

ಬಿಜೆಪಿ ಅಭ್ಯರ್ಥಿ ಯಾರೇ ಆದರೂ ಗೆಲುವಿಗೆ ಶ್ರಮಿಸಿ: ಸುಭಾಷ ಪಾಟೀಲ

ಬೈಲಹೊಂಗಲ 23: ಪ್ರಜಾಪ್ರಭುತ್ವದ ಹಬ್ಬವಾದ ಲೋಕಸಭಾ ಚುನಾವಣೆಯು ಮೇ 7 ರಂದು ನಡೆಯಲಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರೇ ಆದರೂ ಅವರ ಗೆಲುವಿಗೆ ಶ್ರಮಿಸುವುದು ಪ್ರತಿಯೊಬ್ಬ ಕಾರ್ಯಕರ್ತ, ಮುಖಂಡರ ಜವಾಬ್ದಾರಿಯಾಗಿದೆ ಎಂದು ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಹೇಳಿದರು.  

ಪಟ್ಟಣದ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಅವರ ಗೃಹ ಕಚೇರಿಯಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಚುನಾವಣಾ ನಿರ್ವಹಣಾ ಸಮಿತಿ ಸಭೆ, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.  

ಕೇಂದ್ರ ಸರಕಾರದ ಸಾಧನೆಗಳನ್ನು ಮನೆ, ಮನೆಗೆ ತಲುಪಿಸಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಮತದಾರರ ಮನವೋಲಿಸಬೇಕು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಯೋತ್ಪಾದನಾ ಚಟುವಟಿಕೆಗಳು ಸಂಪೂರ್ಣ ನಿಷ್ಕ್ರೀಯವಾಗಿವೆ ಎಂದರು.  

ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಸಂಜಯ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಹೇಳಿದರು.  

ಜಯಪ್ರಕಾಶ್ ಮಾತನಾಡಿ, ಲೋಕಸಭಾ ಚುನಾವಣೆಯ ಕುರಿತು ಬೈಲಹೊಂಗಲ ಕ್ಷೇತ್ರದಲ್ಲಿ ಚುನಾವಣಾ ನಿರ್ವಹಣೆ ಬಗ್ಗೆ ಮಾರ್ಮಿಕವಾಗಿ ವಿವರಿಸಿದರು.   

ಸಂದೀಪ್ ದೇಶಪಾಂಡೆ, ಮಂಡಲ ಅಧ್ಯಕ್ಷ ಗುರುಪಾದ ಕಳ್ಳಿ, ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ಕೋಚೇರಿ, ಗುರು ಮೆಟಗುಡ್ಡ, ಸುನಿಲ ಮರಕುಂಬಿ, ಎಫ್‌.ಎಸ್‌.ಸಿದ್ದನಗೌಡರ, ಜಗದೀಶ ಬೂದಿಹಾಳ, ಸಚಿನ ಕಡಿ, ಸುಭಾಷ ತುರಮರಿ, ಸಂತೋಷ ಹಡಪದ, ಮಂಜು ಮರಶೆಟ್ಟಿ ಸುರೇಶ ಮ್ಯಾಕಲ್, ಗೌಡಪ್ಪ ಹೊಸಮನಿ, ಪ್ರಫುಲ್ ಪಾಟೀಲ, ಶಿವಾನಂದ ಬಡ್ಡಿಮನಿ, ನಾಗೇಶ ಮರಕುಂಬಿ, ಬಸವರಾಜ ಅಂಗಡಿ, ಶಂಭು ಹುಲಿ, ರಾಘು ಕುಮಚಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ