ರಅಣೆಕಟ್ಟು ನಿರ್ಮಾಣಕ್ಕೆ ವಿರೋಧವಿಲ್ಲ: ಸಚಿವ ಡಿ.ಕೆ ಶಿವಕುಮಾ
ಬೆಂಗಳೂರು 28:ಕರ್ನಾಟಕದ ಗಡಿಯಲ್ಲಿರುವ ಬಿಳಿಗುಂಡ್ಲು ಬಳಿ ರಾಸಿಮನಲ್ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ತಮಿಳುನಾಡು ಸರ್ಕಾರದಿಂದ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಬಿಳಿಗುಂಡ್ಲು ಸೇರಿದಂತೆ ಎಲ್ಲಿ ಬೇಕಾದರೂ ಅಣೆಕಟ್ಟು ಕಟ್ಟಲಿ, ಅದಕ್ಕೆ ವಿರೋಧ ವ್ಯಕ್ತಪಡಿಸದೇ ಸಂಪೂರ್ಣ ಸಹಕಾರ ನೀಡುತ್ತೇವೆ. ಸಮುದ್ರಕ್ಕೆ ಹರಿದುಹೋಗುವ ನೀರನ್ನು ಅವರು ಬಳಸಿಕೊಳ್ಳುವುದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಸಹಕಾರ ನೀಡಬೇಕು. ಈ ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದ್ದು, ಇದಕ್ಕೆ ತೊಂದರೆ ಮಾಡಬಾರದು ಎಂದು ಅವರು ಮನವಿ ಮಾಡಿದರು. ಮಂಡ್ಯ ಜಿಲ್ಲೆಯ ಕಬ್ಬು, ಭತ್ತದ ಬೆಳೆಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೀರು ಹರಿಸುವ ಅಧಿಕಾರ ಪ್ರಾಧಿಕಾರಕ್ಕೆ ಇದೆಯೇ ಹೊರತು ಜಲಸಂಪನ್ಮೂಲ ಇಲಾಖೆಗೆ ಇಲ್ಲ. ಇಲ್ಲಿಯವರೆಗೆ ಅಲ್ಲಿನ ರೈತರು ತಮಗೆ ಬೇಕಾದ ಫಸಲುಗಳನ್ನು ಬೆಳೆಯುತ್ತಿದ್ದರು. ಆದರೆ ಇನ್ನು ಮೇಲೆ ನೀರು ಹರಿಯುವಿಕೆ ಆಧರಿಸಿ ಬೆಳೆ ಬೆಳೆಯಬೇಕಾಗಿರುವುದರಿಂದ ಅವರಿಗೆ ಬೇಕಾದತೆ ಬೆಳೆ ಬೆಳೆಯುವುದಕ್ಕೆ ಸಾಧ್ಯವಾಗುವುದಿಲ್ಲ. ಯಾವ ಸಮಯದಲ್ಲಿ ಯಾವ ಫಸಲನ್ನು ಬೆಳೆಯಬೇಕು ಎಂಬ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 