ಸಾಲ ವಸೂಲಿಗೆ ಒತ್ತಡ ಬೇಡ: ರೈತ ಸಂಘ ಆಗ್ರಹ
No pressure for loan recovery: Farmers' association demands
ಲೋಕದರ್ಶನ ವರದಿ
ವಿಜಯಪುರ 25: ಬರಗಾಲದ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟದಲ್ಲಿರುವ ರೈತರ ಮೇಲೆ ಬಾಕಿ ಸಾಲ ವಸೂಲಿಗೆ ಅನಗತ್ಯ ಒತ್ತಡ ಹೇರದಂತೆ ಬ್ಯಾಂಕ್ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.
ಜಿಲ್ಲೆಯ 13 ತಾಲೂಕುಗಳನ್ನು ಸರ್ಕಾರ ಈಗಾಗಲೇ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಮಳೆ ಕೊರತೆ, ಬೆಳೆ ನಷ್ಟ, ಕೃಷಿ ಉತ್ಪಾದನೆ ಕುಸಿತ ಹಾಗೂ ಆದಾಯದ ಕೊರತೆಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಬ್ಯಾಂಕ್ ಶಾಖಾ ವ್ಯವಸ್ಥಾಪಕರ ಮೂಲಕ ನಿರಂತರ ಒತ್ತಡ ಹೇರುವುದು ಸೂಕ್ತ ಕ್ರಮವಲ್ಲ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಾಗರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಉದಾರಾಮ್ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿದ್ದಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಬರದಿಂದ ಸಂಕಷ್ಟಕ್ಕೊಳಗಾದ ರೈತರ ಮನೆಗಳಿಗೆ ತೆರಳಿ ಸಾಲ ಮರುಪಾವತಿಗೆ ಒತ್ತಾಯಿಸುವುದು ಹಾಗೂ ಈಗಾಗಲೇ ಪಡೆದಿರುವ ಸಾಲವನ್ನು ತಕ್ಷಣ ಪಾವತಿಸುವಂತೆ ಒತ್ತಡ ಹೇರುವುದು ರೈತರ ಮೇಲೆ ಮತ್ತಷ್ಟು ಮಾನಸಿಕ ಮತ್ತು ಆರ್ಥಿಕ ಒತ್ತಡ ಉಂಟುಮಾಡುತ್ತಿದೆ ಎಂದು ಸಂಘ ಆರೋಪಿಸಿದೆ.
ರೈತರ ಮನವಿಯಲ್ಲಿ, ಬರಪೀಡಿತ ರೈತರ ಸಾಲ ವಸೂಲಾತಿಗೆ ಅನಗತ್ಯ ಒತ್ತಡ ಹೇರದಂತೆ ಬ್ಯಾಂಕ್ಗಳಿಗೆ ಸೂಚನೆ ನೀಡಬೇಕು, ಕಠಿಣ ರೀತಿಯಲ್ಲಿ ಸಾಲ ಮರುಪಾವತಿಗೆ ಒತ್ತಾಯಿಸುವುದನ್ನು ತಪ್ಪಿಸಬೇಕು ಹಾಗೂ ರೈತರೊಂದಿಗೆ ಮಾನವೀಯ ಮತ್ತು ಗೌರವಯುತವಾಗಿ ವರ್ತಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 