ಶಿಗ್ಗಾವ್

ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

 ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ : ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರ​‍್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು. 


ಸುದ್ದಿ ಓದಿ