ಈವಾರ ಇಲ್ಲ 'ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರ ದರ್ಶನ
No screening of 'Elra Kaleliyatte Kaala' this week
ಗೋಕುಲ ಎಂಟರ್ಟೈನರ್ಸ್ ಬ್ಯಾನರ್‌ನಲ್ಲಿ ಉಷಾ ಗೋವಿಂದರಾಜು ನಿರ್ಮಾಣ ಮಾಡಿರುವ 'ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಗಿದೆ. ಹೌದು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈವಾರ (ಏಪ್ರಿಲ್ 17) ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರದಿಂದ ಸಾದ್ಯವಾಗುತ್ತಿಲ್ಲ. ಸದ್ಯ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದ್ದು, ಒಂದು ವಾರ ಲೇಟ್ ಆಗಿ ಏಪ್ರಿಲ್ 24ರಂದು ರೀಲೀಸ್ ಆಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್, ಹಾಡುಗಳಿಂದ ಪ್ರೇಕ್ಷಕರ ಮನಸು ಗೆದ್ದಿರುವ 'ಎಲ್ರ ಕಾಲೆಳಿಯತ್ತೆ ಕಾಲ' ಥಿಯೇಟರ್‌ನಲ್ಲಿ ನೋಡಲು ಇನ್ನೂ ಒಂದು ವಾರ ಕಾಯಬೇಕಾಗಿದೆ ಪ್ರೇಕ್ಷಕರು. ಇತ್ತೀಚೆಗಷ್ಟೇ ಸಿನಿಮಾ ವೀಕ್ಷಣೆ ಮಾಡಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ.
ಸಾಹಿತಿ, ಹಾಡುಗಾರ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ಅಭಿನಯ ಮಾಡಿರುವ 'ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರವನ್ನು ನಟ ಸುಜಯ್ ಶಾಸ್ತ್ರಿ ನಿರ್ದೇಶನ ಮಾಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ ಈ ಚಿತ್ರದಲ್ಲಿ ಚಂದನ್‌ಗೆ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ ಅರ್ಚನಾ ಕೊಟ್ಟಿಗೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ ರಾಜಗುರು ಹೊಸಕೋಟೆ. ಗೋಕುಲ ಎಂಟರ್ಟೈನರ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾದ ಮೂರನೇ ಸಿನಿಮಾ ಇದಾಗಿದೆ. ಈ ಮೊದಲು ಈ ಸಂಸ್ಥೆ ಅಜಯ್ ರಾವ್ ಅವರ 'ಕೃಷ್ಣ ಟಾಕೀಸ್' ಸಿನಿಮಾ ನಿರ್ಮಾಣ ಮಾಡಿತ್ತು.
90ರ ಕಾಲಘಟ್ಟದ ರೆಟ್ರೊ ಶೈಲಿಯ ಕಥಾಹಂದರ ಹೊಂದಿರುವ 'ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರದ ತಾರಾಗಣದಲ್ಲಿ ದತ್ತಣ್ಣ, ತಾರಾ ಅನುರಾಧ, ಮಂಡ್ಯ ರಮೇಶ್, ಮಂಜು ಪಾವಗಡ, ಮಾಹಂತೇಶ್ ಮುಂತಾದವರು ಇದ್ದಾರೆ. ಹಾಡೊಂದರಲ್ಲಿ ನಟಿ ರಾಗಿಣಿ ದ್ವಿವೇದಿ ಹೆಜ್ಜೆ ಹಾಕಿದ್ದಾರೆ. ಇದೊಂದು ಕಾಲದ ಮಹತ್ವ ಸಾರುವ ಕಥೆಯ ಚಿತ್ರವಾಗಿದ್ದು, ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಲಾಗಿದೆ. ಈ ಚಿತ್ರಕ್ಕೆ ಪ್ರವೀಣ್ ಹಾಗೂ ಪ್ರದೀಪ್ ಸಂಗೀತ, ವಿಶ್ವಜಿತ್ ರಾವ್ ಛಾಯಾಗ್ರಹಣ, ಮೋಹನ್ ಎಲ್ ರಂಗಕಹಳೆ ಸಂಕಲನವಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 