ವಿಜಯಪುರ

ಅಧಿಕೃತ ದರ ಪ್ರಕಟಿಸದೇ ಕಬ್ಬು ಅರೆಯುವಂತಿಲ್ಲ: ಜಿಲ್ಲಾಧಿಕಾರಿ

ಅಧಿಕೃತ ದರ ಪ್ರಕಟಿಸದೇ ಕಬ್ಬು ಅರೆಯುವಂತಿಲ್ಲ: ಜಿಲ್ಲಾಧಿಕಾರಿ

ಲೋಕದರ್ಶನ ವರದಿ 


ವಿಜಯಪುರ 06 ಜಿಲ್ಲೆಯಲ್ಲಿ 2026-27 ನೇ ಸಾಲಿನ ಕಬ್ಬು ಅರೆಯುವ ಹಂಗಾಮು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳು ರೈತರ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಆಯಾ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು  

ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಸೂಚಿಸಿದರು. 

2026-27ನೇ ಸಾಲಿನ ಕಬ್ಬು ಅರೆಯುವ ಹಂಗಾಮಿಗೆ ಪೂರ್ವ ಸಿದ್ಧತೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ರೈತ ಮುಖಂಡರುಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯೋಚಿತ ದರ, ತೂಕದಲ್ಲಿ ಪಾರದರ್ಶಕತೆ,ಕಬ್ಬು ಸಾಗಣೆ ವ್ಯವಸ್ಥೆ ಹಾಗೂ ಕಾರ್ಖಾನೆಗಳಿಂದ ಹೊರಬರುವ ತ್ಯಾಜ್ಯ ನೀರಿನ ಸಮರ​‍್ಕ ನಿರ್ವಹಣೆ ಕುರಿತು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಲಾಯಿತು.

ಜಿಲ್ಲೆಯ ಯಾವುದೇ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಕಬ್ಬಿನ ನ್ಯಾಯಸಮ್ಮತ ಮತ್ತು ನಿಗದಿತ ದರವನ್ನು ಅಧಿಕೃತವಾಗಿ ಪ್ರಕಟಿಸದೇ ಕಬ್ಬು ಅರೆಯುವ ಕಾರ್ಯ ಆರಂಭಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸ್ಪಷ್ಟಪಡಿಸಿದರು. ಪ್ರತಿಯೊಂದು ಕಾರ್ಖಾನೆಯು ತನ್ನ ಅಧಿಕೃತ ಲೆಟರ್ ಹೆಡ್‌ನಲ್ಲಿ ರೈತರ ಖಾತೆಗೆ ಜಮೆಯಾಗುವ ನಿವ್ವಳ ಮೊತ್ತವನ್ನು ಸ್ಪಷ್ಟವಾಗಿ ಪ್ರಕಟಿಸುವ ಮೂಲಕ ರೈತರಿಗೆ ಸಂಪೂರ್ಣ ಮಾಹಿತಿ ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. 


ಸುದ್ದಿ ಓದಿ