ಅಂತರರಾಷ್ಟ್ರೀಯ

ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಇಸ್ಲಾಮಾಬಾದ್ 11: ಪಾಕಿಸ್ತಾನ ಚುನಾವಣಾ ಆಯೋಗ ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. 

ಚುನಾವಣಾ ಆಯೋಗದ ವಿರುದ್ಧದ ನಿಂದನೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಮಾಜಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಚೌಧರಿ ವಿರುದ್ಧ ಪಾಕಿಸ್ತಾನದ ಚುನಾವಣಾ ಆಯೋಗ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. 

ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದರೂ ಹಾಜರಾಗದ ಇಮ್ರಾನ್ ಖಾನ್ ವಿರುದ್ಧ ಆಯೋಗ ವಾರಂಟ್ ಜಾರಿ ಮಾಡಿದೆ.

 

ಸುದ್ದಿ ಓದಿ