ನೂಲಿಯ ಚಂದಯ್ಯ ಹಾಗೂ ಶ್ರೀ ಕೃಷ್ಣ ಜಯಂತಿ ಪೂರ್ವ ಸಿದ್ಧತಾ ಸಭೆ
Nooliya Chandaya and Sri Krishna Jayanti Pre-Preparatory Meeting
ನೂಲಿಯ ಚಂದಯ್ಯ ಹಾಗೂ ಶ್ರೀ ಕೃಷ್ಣ ಜಯಂತಿ ಪೂರ್ವ ಸಿದ್ಧತಾ ಸಭೆ
ಬೆಳಗಾವಿ 30: ನೂಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿಗಳನ್ನು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜು.30) ನಡೆದ ನೂಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿಗಳ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೂಲಿಯ ಚಂದಯ್ಯ ಜಯಂತಿಯನ್ನು ಆ.9 ರಂದು ಹಾಗೂ ಕೃಷ್ಣ ಜಯಂತಿ ಆ.19 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಲು ತಿಳಿಸಿದರು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದನ್ವಯ ಮುದ್ರಿಸಿ ಗಣ್ಯ ಮಾನ್ಯರನ್ನು ಸಮಾರಂಭಕ್ಕೆ ಸಾಕಷ್ಟು ಮುಂಚಿತವಾಗಿ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಕೃಷ್ಣ ಹಾಗೂ ಶ್ರೀ ನೂಲಿಯ ಚಂದಯ್ಯ ಅವರ ಜೀವನ ಸಾಧನೆಗಳ ಬಗ್ಗೆ ತಿಳಿಸುವಂತಹ ನುರಿತ ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸುವಂತೆ ತಿಳಿಸಿದರು.
ನೂಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿಗಳ ಮೆರವಣಿಗೆ ಕುರಿತು ಸದರಿ ಸಭೆಯಲ್ಲಿ ಚರ್ಚಿಸಲಾಯಿತು. ಮೆರವಣಿಗೆಗಳನ್ನು ಅದ್ಧೂರಿಯಾಗಿ ನಡೆಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 